ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಶಂಕರನಾರಾಯಣ ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ ಶಾಲಾ ಕ್ರೀಡಾಂಗಣದಲ್ಲಿ ನಡೆಯಿತು ಬೆಳಗ್ಗಿನ ಪಂದ್ಯಾಟದ ಕ್ರೀಡಾಂಗಣವನ್ನು ಉದ್ಘಾಟಿಸುತ್ತಾ ಮಾತನಾಡಿದ ಶಂಕರನಾರಾಯಣ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಉಮೇಶ್ ಶೆಟ್ಟಿ ಕಲ್ಗದ್ದೆ ಕ್ರೀಡೆಯು ವ್ಯಕ್ತಿಯ ಮೆದುಳನ್ನು ಸಮತೋಲನದಲ್ಲಿಟ್ಟು ದೈಹಿಕವಾಗಿಯೂ ಮಾನಸಿಕವಾಗಿಯೂ ಕ್ರಿಯಾಶೀಲನನ್ನಾಗಿ ಮಾಡುತ್ತದೆ. ಕ್ರೀಡಾಪಟುಗಳು ಕ್ರೀಡಾ ಸ್ಪೂರ್ತಿಯನ್ನು ಕ್ರೀಡಾಂಗಣದಲ್ಲಿ ಎತ್ತಿ ಹಿಡಿಯುವ ಕೆಲಸ ಮಾಡಬೇಕು ಎಂದು ಕ್ರೀಡಾಪಟುಗಳಿಗೆ ಸಲಹೆ ನೀಡಿದರು.
ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಶಂಕರನಾರಾಯಣದ ಕಲ್ಲುಕುಟಿಕ ದೇವಸ್ಥಾನದ ಮುಕ್ತೇಶ್ವರರಾದ ಮಂಜುನಾಥ್ ಶೇಟ್ ನೆರವೇರಿಸಿದರು.
ಪಂದ್ಯಾಟದ ಟ್ರೋಪಿ ಮತ್ತು ಪ್ರಶಸ್ತಿ ಫಲಕಗಳನ್ನು ಶಂಕರನಾರಾಯಣ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಡಾ ಸಚ್ಚಿದಾನಂದ ವೈದ್ಯರು ಅನಾವರಣ ಗೊಳಿಸಿದರು.
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷರಾದ ಮುಕುಂದರಾಯ್ ಶಣೈ ವಹಿಸಿದ್ದರು.
ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಪಂಚಾಯತ್ ಸದಸ್ಯರಾದ ರವಿ ಕುಲಾಲ್ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳಾದ ರವೀಂದ್ರ ನಾಯ್ಕ್, ಯುವಜನ ಸೇವಾ ಕ್ರೀಡಾ ಅಧಿಕಾರಿ ಕುಸುಮಾಕರ್ ಶೆಟ್ಟಿ, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಪ್ರಕಾಶ್ ಚಂದ್ರ ಶೆಟ್ಟಿ, ಅಂಪಾರು ಸಂಯೋಜಕ ವೃತ್ತದ ಇಸಿಓ ಶಂಕರ್ ಹಾಗೂ ರಾಮಚಂದ್ರ ದೇವಾಡಿಗ ಉಪಸ್ಥಿತರಿದ್ದರು.
ಸಂಸ್ಥೆಯ ಉಪ ಪ್ರಾಂಶುಪಾಲರಾದ ಮೋಹನ್ ರಾವ್ ಎಂಜೆ ಅತಿಥಿ ಗಣ್ಯರನ್ನು ಸ್ವಾಗತಿಸಿದರು. ಅಧ್ಯಾಪಕ ರಮನಾಥ್ ಶಣೈ ಕಾರ್ಯಕ್ರಮ ನಿರೂಪಿಸಿ, ಶಿಕ್ಷಕಿ ಜ್ಯೋತಿಕಲಾ ವಂದಿಸಿದರು
ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಶಂಕರನಾರಾಯಣ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಡಾ ಸಚ್ಚಿದಾನಂದ ವೈದ್ಯರು ವಿಜೇತ ತಂಡಗಳಿಗೆ ಬಹುಮಾನ ವಿತರಿಸಿದರು. ಸಭೆಯಲ್ಲಿ ತಾಲೂಕು ಶಿಕ್ಷಣಾಧಿಕಾರಿಗಳ ಸಂಘದ ಅಧ್ಯಕ್ಷರಾದ ಶೇಖರ್ ಶೆಟ್ಟಿಗಾರ್ ರೊಟೇರಿಯನ್ ಸುಧಾಕರ್ ಹೆಗ್ಡೆ ಉಪಸ್ಥಿತರಿದ್ದು, ಶಿಕ್ಷಕ ಕೃಷ್ಣ ಕಾರ್ಯಕ್ರಮ ನಿರೂಪಿಸಿ ಶಿಕ್ಷಕಿ ಅಂಬಿಕಾ ಸ್ವಾಗತಿಸಿದರು. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಸುನಿಲ್ ಕಾರ್ಯಕ್ರಮವನ್ನು ಸಂಘಟಿಸಿ ವಂದಿಸಿದರು
ಫಲಿತಾಂಶ
ಬಾಲಕಿಯರ ವಿಭಾಗ
ಕೆಪಿಎಸ್ ಕೋಟೇಶ್ವರ ಪ್ರಥಮ
ಹೋಲಿ ರೋಸರಿ ಕುಂದಾಪುರ ದ್ವಿತೀಯ
ಬಾಲಕರ ವಿಭಾಗ
ನಿವೇದಿತ ಬಸ್ರೂರು ಪ್ರಥಮ
ಕೆಪಿಎಸ್ ಕೋಟೇಶ್ವರ ದ್ವಿತೀಯ