ಕುಂದಾಪುರ ಮಿರರ್ ಸುದ್ದಿ…
ಕೋಟ: ಕೋಟ ವಿವೇಕ ವಿದ್ಯಾ ಸಂಸ್ಥೆಯಲ್ಲಿ ನಾಲ್ಕು ಇಂಟರ್ಯಾಕ್ಟ್ ಕ್ಲಬ್‍ಗಳ ಪದಗ್ರಹಣ ಸಮಾರಂಭವನ್ನು ಇತ್ತೀಚಿಗೆ ವಿದ್ಯಾಸಂಸ್ಥೆಯಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಪದಗ್ರಹಣ ಅಧಿಕಾರಿಯಾಗಿ ವಲಯ 2ರ ಅಸಿಸ್ಟೆಂಟ್ ಗವರ್ನರ್ ನರಸಿಂಹ ಪ್ರಭು ನಾಲ್ಕು ಕೋಟ ವಿವೇಕ ವಿದ್ಯಾ ಸಂಸ್ಥೆಯಲ್ಲಿ ಇಂಟರ್ಯಾಕ್ಟ್ ಕ್ಲಬ್‍ಗಳ ಅಧ್ಯಕ್ಷರು ಮತ್ತು ಕಾರ್ಯದರ್ಶಿಯವರಿಗೆ ಪದ ಪ್ರಧಾನ ಮಾಡಿದರು. ಮುಖ್ಯ ಅತಿಥಿಗಳಾಗಿ ಶಾರದಾ ಕಾಲೇಜು ಬಸ್ಸೂರು ನಿವೃತ್ತ ಪ್ರಾಂಶುಪಾಲೆ ಚಂದ್ರಕಲಾ ಹೆಗ್ಡೆ ಪ್ರಧಾನ ಭಾಷಣಗೈದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೋಟ ಸಾಲಿಗ್ರಾಮ ರೋಟರಿ ಕ್ಲಬ್‍ನ ಅಧ್ಯಕ್ಷ ದೇವಪ್ಪ ಪಟಗಾರ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ವಿವೇಕ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಜಗದೀಶ ನಾವಡ, ಜಿಲ್ಲಾ ಡ್ರೈವ್ ಸೇಫ್ ಸೇವ್ ಲೈಫ್ ಚೇರ್ಮನ್ ರಾಜೇಂದ್ರ ಸುವರ್ಣ, ಕೋಟ ಸಾಲಿಗ್ರಾಮ ರೋಟರಿ ಕ್ಲಬ್‍ನ ಕಾರ್ಯದರ್ಶಿ ತಿಮ್ಮ ಪೂಜಾರಿ ಮತ್ತು ನಾಲ್ಕು ಇಂಟ್ರಾಕ್ಟ್ ಕ್ಲಬ್‍ಗಳ ಅಧ್ಯಕ್ಷರು ಕಾರ್ಯದರ್ಶಿಯವರು ವೇದಿಕೆಯಲ್ಲಿದ್ದರು.