ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಬೈಂದೂರು ಮಾಜೀ ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಕಾಂಗ್ರೆಸ್ ಸೇರ್ಪಡೆ ಬಹುತೇಕ ಖಚಿತವಾಗಿದ್ದು ದಿನಾಂಕವಷ್ಟೇ ಬಾಕಿಯಿದೆ.
ದೆ. ಕಳೆದ ವಿಧಾನ ಸಭಾ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿ ವರ್ತನೆಗೆ ಬೇಸರಗೊಂಡಿದ ಬಿ.ಎಂ.ಎಸ್. ಪಕ್ಷದ ಚಟುವಟಿಕೆಯಿಂದ ಹೊರಗುಳಿದಿದ್ದರು. ಆದರೆ ಚುನಾವಣೆ ಸಂದರ್ಭ ಕಾಂಗ್ರೆಸ್ ಗೆ ಪರೋಕ್ಷ ಬೆಂಬಲ ನೀಡಿದ್ದರು ಎನ್ನುವ ಆರೋಪವೂ ಕೇಳಿ ಬಂದಿತ್ತು.
ಇದೀಗ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಫೇಸ್ಬುಕ್ ಖಾತೆಯಲ್ಲಿ ಸುಕುಮಾರ ಶೆಟ್ಟರ ಕಾಂಗ್ರೆಸ್ ಸೇರ್ಪಡೆಯನ್ನು ಬಹುತೇಕ ಖಚಿತಗೊಳಿಸಿದ್ದಾರೆ. ಮಾಜೀ ಶಾಸಕ ಕೆ. ಗೋಪಾಲ ಪೂಜಾರಿ ಹಾಗೂ ಸುಕುಮಾರ ಶೆಟ್ಟಿ ಜೊತೆಯಾಗಿ ಡಿಕೆಶಿ ಜೊತೆ ನಿಂತುಕೊಂಡಿರುವ ಫೋಟೋ ವೈರಲ್ ಆಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಮಾಜೀ ಶಾಸಕ ಬಿ.ಎಂ.ಎಸ್., ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮೊದಲ ಸುತ್ತಿನ ಮಾತುಕತೆ ನಡೆದಿದ್ದು ಸೇರ್ಪಡೆಗೆ ದಿನ ನಿಗಧಿಯಾಗಿಲ್ಲ ಎಂದಿದ್ದಾರೆ.