ಕುಂದಾಪುರ :ಕೆಪಿಎಸ್ ಕೋಟೇಶ್ವರದಲ್ಲಿ ಜಿಲ್ಲಾಮಟ್ಟದ ಕುಸ್ತಿ ಪಂದ್ಯಾಟ

0
276

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿ ಉಡುಪಿ ಹಾಗೂ ಕೆಪಿಎಸ್ ಪ್ರೌಢಶಾಲೆ ಕೋಟೇಶ್ವರ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟ ಗುರುವಾರ ಶಾಲಾ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಿತು.

ಪಂದ್ಯಾಟವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದ ಶಾಲಾ ಶಿಕ್ಷಣ ಇಲಾಖೆಯ ಉಡುಪಿ ಜಿಲ್ಲಾ ಉಪ ನಿರ್ದೇಶಕರಾದ ಗಣಪತಿ ಕೆ ಇವರು ಮಾತನಾಡಿ *ಕುಸ್ತಿ ಕ್ರೀಡಾಳುಗಳ ದೇಹ ಮತ್ತು ಮನಸ್ಸನ್ನು ಚುರುಕುಗೊಳಿಸುವುದರೊಂದಿಗೆ ಕಲಿಕಾ ಪ್ರಕ್ರಿಯೆಯ ಪರಿಪೂರ್ಣತೆಗೆ ಸಹಕಾರಿಯಾಗಲಿದೆ ಎಂದರು.

Click Here

Click Here

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೋಟೇಶ್ವರ ಗ್ರಾಮದ ಪ್ರಥಮ ಪ್ರಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಗಿಣಿ ದೇವಾಡಿಗ ಇವರು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಕೋಟೇಶ್ವರ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷರಾದ ಗಜೇಂದ್ರ ಶೆಟ್ಟಿ, ಸಂಸ್ಥೆಯ ಪ್ರಾಂಶುಪಾಲರಾದ ಸುಶೀಲ ಹೊಳ್ಳ, ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಗೋಪಾಲ್ ಶೆಟ್ಟಿ, ಕುಂದಾಪುರ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳಾದ ರವೀಂದ್ರ ನಾಯ್ಕ್, ಬ್ರಹ್ಮಾವರ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸಂಸ್ಥೆಯ ಹಳೆ ವಿದ್ಯಾರ್ಥಿ ಪದ್ಮಾವತಿ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ವಿಜಯ ಕುಮಾರ್ ಶೆಟ್ಟಿ, ಕುಂದಾಪುರ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ , ದೈಹಿಕ ಶಿಕ್ಷಣ ನಿರ್ದೇಶಕರಾದ ಶಂಕರನಾರಾಯಣ ಪಂಚಾಯತ್ ಅಭವೃದ್ಧಿ ಅಧಿಕಾರಿ ದಿನೇಶ್ ನಾಯ್ಕ ಉಪಸ್ಥಿತರಿದ್ದರು.

ಸಂಸ್ಥೆಯ ಉಪ ಪ್ರಾಂಶುಪಾಲರಾದ ಚಂದ್ರಶೇಖರ್ ಶೆಟ್ಟಿ ಅತಿಥಿ ಗಣ್ಯರನ್ನು ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಮಂಜುನಾಥ್ ಹೊಳ್ಳ ಕಾರ್ಯಕ್ರಮ ನಿರೂಪಿಸಿ ದೈಹಿಕ ಶಿಕ್ಷಣ ಶಿಕ್ಷಕರಾದ ಉದಯ ಮಡಿವಾಳ ಎಂ.ವಂದಿಸಿದರು.

Click Here

LEAVE A REPLY

Please enter your comment!
Please enter your name here