ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ : ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ಜರುಗಿದ ಕಂದಾಪುರ ತಾಲೂಕು ಮಟ್ಟದ ಥ್ರೋಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಪಡೆದು, ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಬಾಲಕರ ವಿಭಾಗದ ಥ್ರೋ ಬಾಲ್ ಪಂದ್ಯಾಟದಲ್ಲಿ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.
ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.