ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಪದವಿಪೂರ್ವ ಬಾಲಕ/ಬಾಲಕಿಯರ ಕಬಡ್ಡಿ ಪಂದ್ಯಾಟ
ಕುಂದಾಪುರ ಮಿರರ್ ಸುದ್ದಿ…
ಹೆಮ್ಮಾಡಿ :ದೈಹಿಕ,ಮಾನಸಿಕ ಸ್ಥಿರ ಆರೋಗ್ಯಕ್ಕಾಗಿ ಕ್ರೀಡೆಗಳ ಪಾತ್ರ ಪ್ರಮುಖವಾದದ್ದು ಎಂದು ಬೈಂದೂರು ಕ್ಷೇತ್ರದ ಮಾಜಿ ಶಾಸಕರು ಕೆ.ಗೋಪಾಲ ಪೂಜಾರಿ ಹೇಳಿದರು.
ಅವರು ಪದವಿಪೂರ್ವ ಶಿಕ್ಷಣ ಇಲಾಖೆ ಉಡುಪಿ, ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ ಜಿಲ್ಲಾ ಮಟ್ಟದ ಪದವಿಪೂರ್ವ ಬಾಲಕ/ಬಾಲಕಿಯರ ಕಬಡ್ಡಿ ಪಂದ್ಯಾಟದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.
ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನವರು ಕಳೆದ ವರ್ಷದಿಂದ ಆಯೋಜಿಸುತ್ತಿರುವ ಪದವಿಪೂರ್ವ ವಿಭಾಗದ ಕಬಡ್ಡಿ ಪಂದ್ಯಾಟದ ಆಯೋಜನೆಗೆ ಶ್ಲಾಘನೆ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ಪಾಟ್ನಾ ಪೈರೇಟ್ಸ್ ತಂಡದ ಪ್ರೋ ಕಬಡ್ಡಿ ಆಟಗಾರರಾದ ರಂಜಿತ್ ನಾಯ್ಕ್ ಎಲ್ಲಾ ತಂಡಗಳಿಗೆ ಶುಭ ಹಾರೈಸಿದರು.
ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾದ ಗಣೇಶ ಮೊಗವೀರರವರು ಪ್ರಾಸ್ತಾವಿಕ ನುಡಿಗಳೊಂದಿಗೆ ಮಾತನಾಡುತ್ತಾ ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರೌಢಶಾಲಾ ವಿಭಾಗದಲ್ಲಿ ರಾಜ್ಯ ಮಟ್ಟವನ್ನು ಪ್ರತಿನಿಧಿಸಿದ ಕ್ರೀಡಾ ವಿಭಾಗ ಮೂಲಕ 20ಜನ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣವನ್ನು ನೀಡುವುದಾಗಿ ಭರವಸೆ ನೀಡಿ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಕಟ್ ಬೇಲ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ವೈಶಾಲಿ, ಜನತಾ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಮಂಜು ಕಾಳಾವರ, ಉಡುಪಿ ಜಿಲ್ಲಾ ಪದವಿಪೂರ್ವ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷ ರಾದ ಜೀವನ್ ಕುಮಾರ್ ಶೆಟ್ಟಿ, ಕುಂದಾಪುರ ತಾಲೂಕು ಕ್ರೀಡಾ ಸಂಯೋಜಕರಾದ ರಾಮ ಶೆಟ್ಟಿ,
ವಿವೇಕ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕರಾದ ವಸಂತ್ ಕುಮಾರ್ ಶೆಟ್ಟಿ, ಕಾಲೇಜಿನ ಉಪ-ಪ್ರಾಂಶುಪಾಲರಾದ ರಮೇಶ ಪೂಜಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪಂದ್ಯಾಟದದಲ್ಲಿ, ಬೈಂದೂರು, ಕುಂದಾಪುರ, ಬ್ರಹ್ಮಾವರ,ಉಡುಪಿ, ಕಾರ್ಕಳ, ಕಾಪು ಹಾಗೂ ಹೆಬ್ರಿ ಏಳು ಬಾಲಕ,ಹಾಗೂ ಏಳು ಬಾಲಕಿಯರ ತಂಡಗಳು ಭಾಗವಹಿಸಿದ್ದವು. ಕಾರ್ಯಕ್ರಮದಲ್ಲಿ ವಿವಿಧ ತಾಲೂಕುಗಳ ದೈಹಿಕ ಶಿಕ್ಷಣ ಉಪನ್ಯಾಸಕರು,ಮಾರ್ಗದರ್ಶಕರು, ನಿರ್ಣಾಯಕರು, ಇಲಾಖಾ ಅಧಿಕಾರಿಗಳು ಸಮಸ್ತ ಕ್ರೀಡಾಭಿಮಾನಿಗಳು ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿಗಳು ಸ್ವಾಗತ ನೃತ್ಯಕ್ಕೆ ಹೆಜ್ಜೆ ಹಾಕಿ, ಉಪನ್ಯಾಸಕ, ಉದಯ್ ನಾಯ್ಕ್ ಕಾರ್ಯಕ್ರಮ ನಿರೂಪಿಸಿ, ದೈಹಿಕ ಶಿಕ್ಷಣ ಉಪನ್ಯಾಸಕ ಉಮೇಶ್ ನಾಯ್ಕ್ ವಂದಿಸಿದರು.