ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಅಂಕದ ಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಎಲ್ ಜಿ ಫೌಂಡೇಶನ್ ವತಿಯಿಂದ ಸಮವಸ್ತ್ರ ವಿತರಿಸಲಾಯಿತು. ಸಂಸ್ಥೆಯ ಆಡಳಿತ ನಿರ್ದೇಶಕರಾದ ನಾಗರಾಜ್ ಡಿ ಪಡುಕೋಣೆ ಅವರು ಸಮವಸ್ತ್ರ ವಿತರಿಸಿ ಮಾತನಾಡಿ ಆಂಗ್ಲ ಮಾಧ್ಯಮ ವ್ಯಾಮೋಹದಿಂದ ಸರಕಾರಿ ಶಾಲೆಗಳು ಅವನತಿಯತ್ತ ಸಾಗುತ್ತಿರುವ ಈ ಸಂದರ್ಭದಲ್ಲಿ ದಾನಿಗಳ ನೆರವು ಪಡೆದು ಕೊಂಡು ಪರಿಸರದ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಶಾಲೆ ನೀಡುತ್ತಿದ್ದು ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬೇಕೆಂದರು.
ಈ ಸಂದರ್ಭದಲ್ಲಿ ಟ್ರಸ್ಟಿನ ನಿರ್ದೇಶಕರಾದ ಕುಸುಮ ನಾಗರಾಜ್ ಪಡುಕೋಣೆ, ವ್ಯವಸ್ಥಾಪಕರಾದ ಸುರೇಶ್ ಪಡುಕೋಣೆ, ಕುಂದಾಪುರ ಪತ್ರಕರ್ತರ ಸಂಘದ ಅಧ್ಯಕ್ಷರಾದ ನಾಗರಾಜ್ ರಾಯಪ್ಪನ ಮಠ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ವರದ ಆಚಾರ್, ಉಪಾಧ್ಯಕ್ಷರಾದ ಸುರೇಶ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಬಾಬು ಪೈ, ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಸುನೀತಾ ಉಪಸ್ಥಿತರಿದ್ದರು.
ಶಿಕ್ಷಕರಾದ ರವೀಂದ್ರ ಸ್ವಾಗತಿಸಿದರು. ಸಹ ಶಿಕ್ಷಕಿ ಅಖಿಲಾ ವಂದಿಸಿದರು.