ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಉಡುಪಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ 800 ಮೀಟರ್ ಓಟದ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಶ್ರವಣ್ ದ್ವಿತೀಯ ಸ್ಥಾನವನ್ನು ಪಡೆದು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.