ಕುಂದಾಪುರ ಮಿರರ್ ಸುದ್ದಿ…
ಕೋಟ: ಹುಣಸೆಮಕ್ಕಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಹೆಸಕುತ್ತೂರು ಒಟ್ಟು ಭಾಗವಹಿಸಿದ್ದ 27 ಸ್ಪರ್ಧೆಗಳಲ್ಲಿ 23 ಪ್ರಶಸ್ತಿಗಳನ್ನು ಪಡೆದು ಕ್ಲಸ್ಟರ್ ಮಟ್ಟದಲ್ಲಿ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಯೊಂದಿಗೆ ಅತಿ ಹೆಚ್ಚು ಪ್ರಶಸ್ತಿಗಳನ್ನು ಪಡೆದ ಶಾಲೆಯಾಗಿ ಹೊರಹೊಮ್ಮಿದೆ. ಒಟ್ಟು 9 ಪ್ರಥಮ, 9 ದ್ವಿತೀಯ ಹಾಗೂ 5 ತೃತೀಯ ಪ್ರಶಸ್ತಿಗಳನ್ನು ಪಡೆದುಕೊಂಡಿದೆ ಅಲ್ಲದೆ 9 ವಿದ್ಯಾರ್ಥಿಗಳು ಕುಂದಾಪುರ ವಲಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಭಾಗವಹಿಸಿದ ಹಾಗೂ ಪ್ರಶಸ್ತಿ ಪಡೆದ ಎಲ್ಲಾ ವಿದ್ಯಾರ್ಥಿಗಳನ್ನು ಶಾಲಾ ಎಸ್ ಡಿ ಎಂ ಸಿ, ಶಾಲಾ ಶಿಕ್ಷಕ ಬಳಗ, ವಿದ್ಯಾರ್ಥಿಗಳು, ಪೋಷಕರು ಅಭಿನಂದಿಸಿದ್ದಾರೆ.