ಕುಂದಾಪುರ ಮಿರರ್ ಸುದ್ದಿ…
ಬೈಂದೂರು :ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 73ನೇ ಜನ್ಮದಿನದ ಪ್ರಯುಕ್ತ ಬಿಜೆಪಿ ಯುವ ಮೋರ್ಚಾ ಬೈಂದೂರು ಮಂಡಲ ವತಿಯಿಂದ ರಕ್ತದಾನ ಶಿಬಿರ ನಡೆಯಿತು.
ಕಾರ್ಯಕ್ರಮದಲ್ಲಿ ಬೈಂದೂರು ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟೆಹೊಳೆ ,ಮಂಡಲ ಬಿಜೆಪಿ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ ,ರಾಜ್ಯ ಯುವ ಮೋರ್ಚ ಕಾರ್ಯಕಾರಣಿ ಸದ್ಯಸ್ಯರು ಪ್ರಜ್ವಲ್ ಶೆಟ್ಟಿ, ಜಿಲ್ಲಾ ಯುವ ಮೋರ್ಚ ಪ್ರಧಾನ ಕಾರ್ಯದರ್ಶಿ ಶರತ್ ಶೆಟ್ಟಿ ಉಪ್ಪುಂದ, ಮಂಡಲ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಅನುರ್ ಮೆಂಡನ್, ಆಕಾಶ್ ಪೂಜಾರಿ, ಉಪಾಧ್ಯಕ್ಷ ಲೋಹಿತ್ ಶೆಟ್ಟಿ, ಮಂಡಲ ಉಪಾಧ್ಯಕ್ಷರಾದ ಶೇಖರ್ ಖಾರ್ವಿ, ಪುಷ್ಪರಾಜ್ ಶೆಟ್ಟಿ, ಮಾಲಿನಿ ಕೆ ಹಾಗೂ ಮಂಡಲ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.