ಕುಂದಾಪುರ ಮಿರರ್ ಸುದ್ದಿ…
ಕೋಟ: ಗಾಂಧಿ ಜಯಂತಿ ಅಂಗವಾಗಿ ಕೋಟತಟ್ಟು ಗ್ರಾಮ ಪಂಚಾಯತಿ ನೇತ್ರತ್ವದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪರಿಕಲ್ಪನೆಯ ಸ್ವಚ್ಚಭಾರತ್ ಕಾರ್ಯಕ್ರಮವನ್ನು ಕೋಟತಟ್ಟು ಗ್ರಾಮದ ಸ್ಮಶಾನದಲ್ಲಿ ನಡೆಸಲಾಯಿತು.
ಈ ಸಂಧರ್ಭದಲ್ಲಿ ಪಂಚಾಯತಿ ಅಧ್ಯಕ್ಷೆ ಅಶ್ವಿನಿ ದಿನೇಶ್, ಉಪಾಧ್ಯಕ್ಷೆ ವಾಸು ಪೂಜಾರಿ, ಸದಸ್ಯರಾದ ಪ್ರಮೋದ್ ಎಚ್ ಹಂದೆ, ಸತೀಶ್ ಕುಂದರ್ ಬಾರಿಕೆರೆ, ರವೀಂದ್ರ ತಿಂಗಳಾಯ, ರಾಬರ್ಟ್ ರೋಡ್ರಿಗಸ್, ಸರಸ್ವತಿ, ಜ್ಯೋತಿ, ವಿದ್ಯಾ ಸಾಲಿಯನ್, ಸೀತಾ, ಸಾಹಿರಾ ಬಾನು, ಹಾಗೂ ಪಂಚಾಯತ್ ಸಿಬ್ಬಂದಿ ಬಾಬು ಸೀರಿಯನ ಹಾಗೂ ಪಂಚಾಯತ್ ಮಾಜಿ ಅಧ್ಯಕ್ಷರಾದ ಪ್ರಭಾಕರ್ ಕಾಂಚನ ಈ ಸ್ವಚ್ಚತಾ ಕಾರ್ಯದಲ್ಲಿ ಪಾಲ್ಗೊಂಡರು.