ಕುಂದಾಪುರ :ತೆರೆಗೆ ಬರಲು ಸಿದ್ಧವಾಗಿದೆ ಕನಸು ಕಂಗಳ ಕನ್ನಡಿಗನ ಕನಸಿನ ಕೂಸು ” ಇನಾಮ್ದಾರ್” ….

0
640

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಈಗಾಗಲೇ ಸಾಕಷ್ಟು ಸದ್ದು ಮಾಡುತ್ತಿರುವ ಕನ್ನಡದ ಕನ್ನಡಿಗರೇ ನಿರ್ಮಿಸಿರುವ ಇನಾಮ್ದಾರ್ ಚಿತ್ರ ಇನ್ನು ಕೆಲವೇ ದಿನಗಳಲ್ಲಿ ತೆರೆಯ ಮೇಲೆ ಬರಲಿದೆ. ವಿಭಿನ್ನ ಕಥಾ ಹೊಂದಿರುವ ಇನಾಮ್ದಾರ್ ಚಿತ್ರ ನಟ ನಿರ್ದೇಶಕ ಸಂದೇಶ್ ಶೆಟ್ಟಿ ಆಜ್ರಿ ಅವರ ಕನಸಿನ ಕೂಸು ಎಂದರೆ ತಪ್ಪಾಗಲಾರದು. ಕತ್ತಲೆ ಕೋಣೆ ಎನ್ನುವ ವಿಭಿನ್ನ ಹಾರರ್ ಬೇಸ್ ಇರುವ ಸೈಂಟಿಫಿಕ್ ಥ್ರಿಲ್ಲರ್ ಚಿತ್ರವನ್ನು ತೆರೆಯ ಮೇಲೆ ತಂದಿದ್ದ ಸಂದೇಶ ಶೆಟ್ಟಿ ಆಜ್ರಿ, ಮೂರು ವರ್ಷಗಳ ಗ್ಯಾಪ್ ಬಳಿ ಈ ಬಾರಿ “ಇನಾಮ್ದರ್” ಚಿತ್ರದ ಮೂಲಕ ಚಿತ್ರ ರಸಿಕರಿಗೆ ವಿಭಿನ್ನವಾಗಿರುವ ಕಥೆಯನ್ನು ಮುಂದಿಡಲು ಬರುತ್ತಿದ್ದಾರೆ. ಬಹಳಷ್ಟು ಇಷ್ಟ ಪಟ್ಟು ಸಿದ್ದಪಡಿಸಿದ ಕಥೆಯನ್ನು ತೆರೆಯ ಮೇಲೆ ತರುವ ನಿಟ್ಟಿನಲ್ಲಿ ಬಯಲು ಸೀಮೆ ಯಿಂದ ಹಿಡಿದು ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ನಿರ್ದೇಶಕ ರ ಮಾರ್ಗದರ್ಶನದಲ್ಲಿ ಚಿತ್ರ ತಂಡ ಸಾಕಷ್ಟು ಶ್ರಮವಹಿಸಿದ್ದಾರೆ. ನಿರ್ದೇಶಕರ ಆಸೆಗೆ ಮತ್ತು ಶ್ರಮಕ್ಕೆ ಪೂರಕವಾಗಿ ನಿರ್ಮಾಪಕ ನಿರಂಜನ್ ತಲ್ಲೂರ್ ಸಾಥ್ ನೀಡುವುದರ ಜೊತೆಗೆ 24/7 ನಿರ್ದೇಶಕರ ಬೆನ್ನೆಲುಬಾಗಿ ನಿಂತಿದ್ದಾರೆ.

Click Here

Click Here

ಇನ್ನು ಇನಾಮ್ದಾರ್ ಕಥೆಗೆ ಪೂರಕವಾದ ಫ್ರೇಮ್ ಮೂಲಕ ಕಣ್ಣಿಗೆ ಕಟ್ಟಿಕೊಡುವ ರೀತಿಯ ಚಿತ್ರಣ ಸೆರೆ ಹಿಡಿದಿರುವ ಕ್ಯಾಮೆರಾಮ್ಯಾನ್ ಮುರುಳಿ ಅವರು ಚಿತ್ರದ ಇನ್ನೊಂದು ಪಿಲ್ಲರ್ ಎಂದರೆ ತಪ್ಪಾಗಲಾರದು. ಬಯಲುಸೀಮೆಯ ಗಟ್ಟಿ ನೆಲೆದಿಂದ ಹಿಡಿದು ಪಶ್ವಿಮ ಘಟ್ಟದ ತಪ್ಪಲಿನ‌ ಕಾಡಿನಲ್ಲಿಯೂ ವಯಸ್ಸಿಗೆ ಮೀರಿದ ಉತ್ಸಾಹ ತೋರುತ್ತಾ, ಚಿತ್ರತಂಡವನ್ನು ಹುರಿದುಂಬಿಸಿ ಚಿತ್ರೀಕರಣ ಮಾಡಿಸ ಶ್ರೇಯ ಮುರುಳಿ ಅವರಿಗೆ ಸಲ್ಲುತ್ತದೆ. ಬೆಳಗಾವಿಯ ಗಟ್ಟಿಮಣ್ಣಿನ ಖಡಕ್ ಸ್ಟಾರ್ ರಂಜನ್ ಛತ್ರಪತಿ ಇನಾಮ್ದಾರ್ ಮೂಲಕ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡಿ, ಕಥೆಗೆ ಬೇಕಾದಂತೆ ತಮ್ಮ ಪ್ರತಿಭೆಯನ್ನು ಓರೆ ಹಚ್ಚಿದ್ದಾರೆ.‌ ಕುಡ್ಲದ ಬೆಡಗಿ ನಗುಮುಖದ ಸುಂದರಿ ಚಿರಶ್ರೀ ಅಂಚನ್ ಈಗಾಗಲೇ ಕನ್ನಡ, ತುಳು, ತಮಿಳು ಸಿನೆಮಾಗಳಲ್ಲಿ ನಾಯಕಿಯಾಗಿ ಮಿಂಚಿದ್ದು, ಸದ್ಯ ಇನಾಮ್ದಾರ್ ಸಿನೆಮಾದ ನಾಯಕಿಯಾಗಿ ಕುಡ್ಲದ ಕಂಪು ಹರಿಸಿದ್ದಾರೆ. ಚಿತ್ರದ ಮುಖ್ಯ‌ಭೂಮಿಕೆಯಲ್ಲಿ ಪ್ರಮೋದ್ ಶೆಟ್ಟಿ, ಶರತ್ ಲೋಹಿತಾಶ್ವ, ಅವಿನಾಶ್, ಎಂಕೆಮಠ ಅವರಂತ ಹಿರಿಯ ನಟರಿದ್ದು, ಕಾಂತಾರ ಖ್ಯಾತಿಯ ನಾಗರಾಜ್ ಬೈಂದೂರು, ಈಗಾಗಲೇ ಕನ್ನಡ ಚಿತ್ರರಂಗದಲ್ಲಿ ಛಾಪು ಮೂಡಿಸಿರುವ ಪ್ರಶಾಂತ್ ಸಿದ್ಧಿ, ರಘುಪಾಂಡೇಶ್ವರ್, ಕರಣ್ ಕುಂದರ್, ಯಶ್ ಆಚಾರ್ಯ, ಹಾಲಂಬಿ ಅವರಂತ ಕರಾವಳಿಯ ಪ್ರತಿಭೆಗಳ ಸಮಾಗಮ ಚಿತ್ರದಲ್ಲಿ ನೋಡಬಹುದಾಗಿದೆ. ಚಿತ್ರಕ್ಕೆ ಆರ್ ಕೆ ಮಂಗಳೂರು ಸಹಕಾರ ನೀಡಿದ್ದು, ಸಹ ನಿರ್ದೇಶನದಲ್ಲಿ ರಾಜ್ ಕೃಷ್ಣ ಮತ್ತು ಮಿಥುನ್ ತೀರ್ಥಹಳ್ಳಿ ಸಾಥ್ ನೀಡಿದ್ದಾರೆ. ಚಿತ್ರತಂಡದಲ್ಲಿ ಸನತ್ ಉಪ್ಪುಂದ, ಅನೀಶ್ ಡಿಸೋಜಾ, ನಾಗೇಶ್ ಮತ್ತಿತರರು ಸಹಕಾರ ನೀಡಿದ್ದಾರೆ.

ಬಯಲುಸೀಮೆಯ ಒಂದು ಜನಾಂಗ ಮತ್ತು ಪಶ್ಚಿಮ ಘಟ್ಟದ ತಪ್ಪಲಿನಲ್ಲಿರುವ ಇನ್ನೊಂದು ಜನಾಂಗ ನಡುವೆ ನಡೆಯುವ ವರ್ಣ ಭೇದದ ಕಥೆಯ ಜೀವಾಳ. ಚಿತ್ರದುದ್ದಕ್ಕೂ ಪಶ್ಚಿಮ ಘಟ್ಟದ ತಪ್ಪಲಿನ ಸೌಂದರ್ಯ ಕಾಣಬಹುದಾಗಿದ್ದು, ಬಯಲು ಸೀಮೆಯ ಸೊಬಗು ಚಿತ್ರ ರಸಿಕರಿಗೆ ಮೆಚ್ಚಿಗೆಯಾಗಲಿದೆ. ಸದ್ಯ ಇನಾಮ್ದಾರ್ ಚಿತ್ರ ಚಿತ್ರೀಕರಣ ಸಂಪೂರ್ಣ ಮುಗಿದಿದ್ದು, ಇನ್ನು ಕೆಲವು ದಿನಗಳಲ್ಲಿ ಕರಾವಳಿ ಪ್ರತಿಭೆ ಸಂದೇಶ್ ಶೆಟ್ಟಿ ಆಜ್ರಿ ನಿರ್ದೇಶನದ ಎರಡನೇಯ ಚಿತ್ರ ತೆರೆಯ ಮೇಲೆ ಮೂಡಿಬರಲಿದೆ.

Click Here

LEAVE A REPLY

Please enter your comment!
Please enter your name here