ಕುಂದಾಪುರ ಮಿರರ್ ಸುದ್ದಿ
ಕುಂದಾಪುರ: ಮಹಾತ್ಮಗಾಂಧಿಯವರ ತತ್ವ ಹಾಗೂ ಸಿದ್ಧಾಂತವನ್ನು ನಮ್ಮಲ್ಲಿ ಅಳವಡಿಸಿಕೊಂಡು ಮುನ್ನೆಡೆಯುವುದರ ಮೂಲಕ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಅಮಾಸಬೈಲು ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಎ.ಜಿ.ಕೊಡ್ಗಿ ಹೇಳಿದರು.
ಅವರು ಸೋಮವಾರ ಅಮಾಸಬೈಲು ಶ್ರೀ ಬ್ರಹ್ಮಬೈದರ್ಕಳ ಗರಡಿ ವಠಾರದಲ್ಲಿ ನಡೆದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಕುಂದಾಪುರ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್(ರಿ.) ಧರ್ಮಸ್ಥಳ, ತಾಲೂಕು ಜನಜಾಗೃತಿ ವೇದಿಕೆ ಕುಂದಾಪುರ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಹಾಗೂ ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಅಮಾಸಬೈಲು ವಲಯ ಇವರ ಸಹಯೋಗದೊಂದಿಗೆ 152ನೇ ಗಾಂಧಿ ಜಯಂತಿಯ ಸಂಭ್ರಮಾಚರಣೆ ಪ್ರಯುಕ್ತ ಗಾಂಧಿಸ್ಮೃತಿ ಕಾರ್ಯಕ್ರಮ ಹಾಗೂ ದುಶ್ಚಟ ಮುಕ್ತ ಸಮಾಜಕ್ಕಾಗಿ ವ್ಯಸನ ಮುಕ್ತ ಸಾಧಕರ ಸಮಾವೇಶ ಉದ್ಘಾಟಿಸಿ ಮಾತನಾಡಿದರು.
ಕುಂದಾಪುರ ಜನಜಾಗೃತಿ ವೇದಿಕೆ ಸ್ಥಾಪಕಾಧ್ಯಕ್ಷ ಬಿ. ಅಪ್ಪಣ್ಣ ಹೆಗ್ಡೆ ನವಜೀವನ ಸದಸ್ಯರಿಗೆ ಶಾಲು ಹೊದಿಸಿ ಅಭಿನಂದನೆ ಸಲ್ಲಿಸಿದರು. ಕುಂದಾಪುರ ಜನಜಾಗೃತಿ ವೇದಿಕೆಯ ಅಧ್ಯಕ್ಷ ರಟ್ಟಾಡಿ ನವೀನ್‍ಚಂದ್ರ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ವ್ಯಸನ ಮುಕ್ತರಿಗೆ ಸಮಾಜದಲ್ಲಿ ಗೌರವ ಸಿಗುತ್ತದೆ. ಜತೆಗೆ ಮುಖ್ಯವಾಹಿನಿಗೆ ಬರಲು ಸಾಧ್ಯ ಎಂದರು.
ಶಿಕ್ಷಕ ಹಡಿನಬಾಳು ಹರಿದಾಸ ಗಣಪತಿ ಹೆಗಡೆ ವಿಶೇಷ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಜಿಲ್ಲಾ ನಿರ್ದೇಶಕ ಗಣೇಶ್ ಬಿ, ಉಡುಪಿ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷ ನವೀನ್ ಅಮೀನ್, ಅಮಾಸಬೈಲು ಗ್ರಾ.ಪಂ.ಉಪಾಧ್ಯಕ್ಷೆ ರಟ್ಟಾಡಿ ರಜನಿ ಶೆಡ್ತಿ, ಅಮಾಸಬೈಲು ಠಾಣೆಯ ಸಹಾಯಕ ಪೋಲೀಸ್ ಉಪನಿರೀಕ್ಷಕ ಉಮೇಶ್ ನಾಯಕ್, ಧ.ಗ್ರಾ.ಯೋಜನೆಯ ಕುಂದಾಪುರ ಕೇಂದ್ರ ಸಮಿತಿಯ ಅಧ್ಯಕ್ಷೆ ಶೋಭಾಚಂದ್ರ, ಅಮಾಸಬೈಲು ವಲಯ ಅಧ್ಯಕ್ಷ ಕರುಣಾಕರ್ ಶೆಟ್ಟಿಗಾರ್ ಹಾಗೂ 8 ವಲಯದ ಅಧ್ಯಕ್ಷರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಮೀನಾಕ್ಷಿ ಹಾಗೂ ಸುಶೀಲಾ ಪ್ರಾರ್ಥಿಸಿದರು. ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಕುಂದಾಪುರ ತಾಲೂಕು ಹಿರಿಯ ಯೋಜನಾಧಿಕಾರಿ ಮುರಳೀಧರ ಕೆ.ಶೆಟ್ಟಿ ಸ್ವಾಗತಿಸಿದರು. ಸತ್ಯನಾರಾಯಣ ರಾವ್ ಕಾರ್ಯಕ್ರಮ ನಿರ್ವಹಿಸಿದರು. ವಲಯ ಮೇಲ್ವಿಚಾರಕ ದೀಪಕ್ ವಂದಿಸಿದರು.