ಕುಂದಾಪುರ ಮಿರರ್ ಸುದ್ಧಿ…
ಕುಂದಾಪುರ :ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯವರು ನಡೆಸಿದ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾಟದಲ್ಲಿ ಪ್ರದ್ಯಾನ್ ಬ್ಯಾಟಿಂಗ್ ಮತ್ತು ಬೌಲಿಂಗ್ ವಿಭಾಗದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾದರೆ ಸುಶಾಂತ್ ಉತ್ತಮ ವಿಕೆಟ್ ಕೀಪಿಂಗ್ ಹಾಗೂ ಬ್ಯಾಟಿಂಗ್ ಮಾಡಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದು ಮೈಸೂರು ವಿಭಾಗೀಯ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.
ಈರ್ವರೂ ವಾಲಿಬಾಲ್, ಕಬಡ್ಡಿ ಹಾಗೂ ಬಾಲ್ ಬ್ಯಾಡ್ಮಿಂಟನ್ ನಲ್ಲಿ ಉತ್ತಮ ಆಟಗಾರರಾಗಿ ಶಾಲೆಗೆ ಕೀರ್ತಿ ತಂದಿದ್ದಾರೆ. ಇವರು ಮುಂದಿನ ಪಂದ್ಯಗಳಲ್ಲಿ ಇನ್ನೂ ಹೆಚ್ಚಿನ ಸಾಧನೆ ಮಾಡಲಿ ಎಂದು ಮುಖ್ಯೋಪಾಧ್ಯಾಯಿನಿ ಮತ್ತು ಶಿಕ್ಷಕ ವೃಂದ, ಎಸ್ ಡಿ ಎಂ ಸಿ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ವಿದ್ಯಾರ್ಥಿ ವೃಂದ ಅಭಿನಂದಿಸಿ ಶುಭ ಹಾರೈಸಿದ್ದಾರೆ.