ಕುಂದಾಪುರ ಮಿರರ್ ಸುದ್ದಿ…
ಹೆಮ್ಮಾಡಿ: ದಾರಿಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದ ಪರಿಣಾಮ ಪತಿ ಸಾವನ್ನಪ್ಪಿದರೆ, ಪತಿಯನ್ನು ರಕ್ಷಿಸಲು ಹೋಗಿ ಪತ್ನಿಯೂ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕುಂದಾಪುರ ತಾಲೂಕಿನ ಹೆಮ್ಮಾಡಿ ಗ್ರಾಮದ ಸುಳ್ಸೆ ಭಟ್ರು ಮನೆ ತೋಟದ ಜಮೀನಿನಲ್ಲಿ ನಡೆದಿದೆ.
ಮಹಾಬಲ ದೇವಾಡಿಗ (58), ಲಕ್ಷ್ಮಿ ಮಹಾಬಲ ದೇವಾಡಿಗ (48) ಮೃತರು. ಮಧ್ಯಾಹ್ನದ ವೇಳೆ ಮನೆ ಕೆಲಸಕ್ಕೆ ಹೋಗುವಾಗ ಪತಿಗೆ ವಿದ್ಯುತ್ ಶಾಕ್ನಿಂದ ಒದ್ದಾಡ್ತಿದ್ದ ಪತ್ನಿ ರಕ್ಷಿಸಲು ಹೋಗಿ ದಂಪತಿಗಳು ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಡಿವೈಎಸ್ಪಿ ಬೆಳ್ಳಿಯಪ್ಪ, ಕುಂದಾಪುರ ವೃತ್ತ ನಿರೀಕ್ಷಕರು ಜಯರಾಮ್ ಡಿ. ಗೌಡ, ಕಂದಾಯ ಆರ್.ಐ . ರಾಘವೇಂದ್ರ ದೇವಾಡಿಗ, ಸುಳ್ಸೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ನಾಗರಾಜ್ ಪುತ್ರನ್, ಶೇಖರ್ ಬಳೆಗಾರ, ಗಂಗೊಳ್ಳಿ JE ದಿನೇಶ್ ಶೆಟ್ಟಿ, ಸುಳ್ಸೆ ಗ್ರಾಮ ಪಂಚಾಯತ್ ಗ್ರಾಮ ಕರಣಿಕ ಸೋಮಪ್ಪ, ಹಾಗೂ ಪೊಲೀಸ್ ಸಿಬ್ಬಂದಿಗಳು, ಮೆಸ್ಕಾಂ ಸಿಬ್ಬಂದಿಗಳು, ಸಾರ್ವಜನಿಕರು ಹಾಜರಿದ್ದರು
ಕಂಡ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ