ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ : ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ನೇಶನಲ್ ಪದವಿ ಪೂರ್ವ ಕಾಲೇಜು ಬಾರಕೂರು ಇವರ ಸಹಯೋಗದಲ್ಲಿ ನಡೆದ ಟೆನ್ನಿಸ್ ವಾಲಿಬಾಲ್ ಪಂದ್ಯಾಟ ದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕ ಮತ್ತು ಬಾಲಕಿಯರ ತಂಡ ದ್ವಿತೀಯ ಸ್ಥಾನ ವನ್ನು ಪಡೆಯುವುದರ ಮೂಲಕ ವಿದ್ಯಾರ್ಥಿಗಳಾದ ಸಾತ್ವಿಕ್, ವಿನಯ್, ಕಲ್ಪಿತಾ, ಲಿಖಿತಾ ರಾಜ್ಯ ಮಟ್ಟದಲ್ಲಿ ನಡೆಯುವ ಟೆನ್ನಿಸ್ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.
ದೈಹಿಕ ಶಿಕ್ಷಣದ ಉಪನ್ಯಾಸಕರಾದ ರಾಘವೇಂದ್ರ ಗಾಣಿಗರವರು ವಿದ್ಯಾರ್ಥಿಗಳನ್ನು ತರಬೇತಿಗೊಳಿಸಿರುತ್ತಾರೆ.
ವಿದ್ಯಾರ್ಥಿಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.