ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ : ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ನೇಶನಲ್ ಪದವಿ ಪೂರ್ವ ಕಾಲೇಜು ಬಾರಕೂರು ಇವರ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ಟೆನ್ನಿ ಕೋಯಿಟ್ ಪಂದ್ಯಾಟ ದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಸ್ಥಾನವನ್ನು ಪಡೆದು ವಿದ್ಯಾರ್ಥಿಗಳಾದ ಶಿಹಾಬ್ , ಮನೀಶ್ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.