ಕುಂದಾಪುರ ಮಿರರ್ ಸುದ್ದಿ…
ಕೋಟ : ಪಾಂಡೇಶ್ವರದ ನಿವಾಸಿ ಪಿ.ಶೀನ ಪೂಜಾರಿ 85.ವ ಶನಿವಾರ ಅನಾರೋಗ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಪತ್ನಿ, ಆರು ಜನ ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಮಾಜಿ ಭೂ ನ್ಯಾಯ ಮಂಡಳಿ ಸದಸ್ಯರಾಗಿ, ಸಾಸ್ತಾನ ಸಹಕಾರಿ ವ್ಯವಸಾಯಕ ಸಂಘದ ಮಾಜಿ ನಿರ್ದೇಶಕರಾಗಿ, ಪಾಂಡೇಶ್ವರ ಪಂಚಾಯತ್ ಬೋರ್ಡ್ ಮಾಜಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.