ಕುಂದಾಪುರ ಮಿರರ್ ಸುದ್ದಿ…
ಉಪ್ಪಿನಕುದ್ರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಕೊಲ್ಲೂರಿನಲ್ಲಿ ಜರುಗಿದ ಬೈಂದೂರು ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಉಪ್ಪಿನಕುದ್ರು ಪ್ರೌಢಶಾಲೆಯ ವಿದ್ಯಾರ್ಥಿನಿ ನಿಕ್ಷಿತಾ 14 ವರ್ಷ ವಯೋಮಿತಿಯಲ್ಲಿ 100 ಮೀ ಹಾಗೂ 200 ಮೀಟರ್ ಓಟದ ಸ್ಪರ್ಧೆ ಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಕ್ರೀಡಾ ಕೂಟಕ್ಕೆ ಆಯ್ಕೆಯಾಗಿರುತ್ತಾಳೆ.
14 ವರ್ಷ ವಯೋಮಿತಿಯಲ್ಲಿ ವಯಕ್ತಿಕ ಚಾಂಪಿಯನ್ ಶಿಪ್ ಪಡೆದು ಶಾಲೆಗೆ ಹಾಗೂ ಊರಿಗೆ ಗೌರವವನ್ನು ತಂದಿರುತ್ತಾಳೆ. ಇವಳನ್ನು ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ ಹಾಗೂ ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷರು ಹಾಗೂ ಸದಸ್ಯರು ಅಭಿನಂದಿಸಿದ್ದಾರೆ.