ಕುಂದಾಪುರ ಮಿರರ್ ಸುದ್ದಿ…
ಕೋಟ: ಕಲೆ-ಸಂಸ್ಕೃತಿಗಳು ನಮ್ಮ ಬದುಕಿನ ಅವಿಭಾಜ್ಯ ಅಂಗವಾಗಿದ್ದು, ಅವುಗಳನ್ನು ಉಳಿಸಿ-ಬೆಳೆಸಬೇಕಾದ ಕಾರ್ಯ ಪ್ರತಿ ಗ್ರಾಮ-ಗ್ರಾಮದಲ್ಲೂ ನಡೆಯಬೇಕು ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.
ಅವರು ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್‍ನಲ್ಲಿ ಕೋಟತಟ್ಟು ಗ್ರಾ.ಪಂ., ಶಿವರಾಮ ಕಾರಂತ ಟ್ರಸ್ಟ್ ಉಡುಪಿ, ಕಾರಂತ ಹುಟ್ಟೂರ ಪ್ರತಿಷ್ಠಾನ ಆಶ್ರಯದಲ್ಲಿ, ಕಾರಂತ ಜನ್ಮದಿನಾಚರಣೆ, ಹುಟ್ಟೂರು ಪ್ರಶಸ್ತಿ ಪ್ರದಾನ ಪ್ರಯುಕ್ತ ನಡೆಯುತ್ತಿರುವ ಕಾರಂತೋತ್ಸವ ಕಾರ್ಯಕ್ರಮಕ್ಕೆ ಅ.7ರಂದು ಭೇಟಿ ನೀಡಿ ಮಾತನಾಡಿದರು.
ಗ್ರಾಮೀಣ ಪ್ರದೇಶವೊಂದರಲ್ಲಿ ಕಾರಂತ ಕಲಾಭವನದಂತಹ ಭವ್ಯ ಸಂಸ್ಥೆಯನ್ನು ಕಟ್ಟಿಬೆಳೆಸುತ್ತಿರುವುದು ಅತ್ಯಂತ ಶ್ಲಾಘನೀಯ ಎಂದರು.
ಗ್ರಾ.ಪಂ. ಅಧ್ಯಕ್ಷ ಸತೀಶ್ ಬಾರಿಕೆರೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭ ಕಾರ್ಯಕ್ರಮದ ಸಂಘಟಕರಾದ ಮಾಜಿ ಸಚಿವ, ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿಯವರು ಸಚಿವೆ ಶೋಭಾ ಕರಂದ್ಲಾಜೆಯವರನ್ನು ಗೌರವಿಸಿದರು.
ಉಡುಪಿ ಶಾಸಕ ಯಶಪಾಲ್ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಜಿಲ್ಲಾ ನಿರ್ದೇಶಕಿ ಪೂರ್ಣಿಮಾ, ಕೋಡಿ ಗ್ರಾ.ಪಂ. ಅಧ್ಯಕ್ಷ ಪ್ರಭಾಕರ ಮೆಂಡನ್, ಕೋಟತಟ್ಟು ಗ್ರಾ.ಪಂ. ಉಪಾಧ್ಯಕ್ಷೆ ಸರಸ್ವತಿ, ಕೋಟ ಗ್ರಾ.ಪಂ. ಉಪಾಧ್ಯಕ್ಷ ಪಾಂಡು ಮೊದಲಾದವರು ಉಪಸ್ಥಿತರಿದ್ದರು.
ಪಿಡಿಒ ರವೀಂದ್ರ ರಾವ್ ಕಾರ್ಯಕ್ರಮ ನಿರೂಪಿಸಿದರು.