ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಮುಂಬಯಿನಲ್ಲಿ ಎಕನಾಮಿಕ್ ಟೈಮ್ಸ್ ವತಿಯಿಂದ ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಶಿಕ್ಷಣ ಮತ್ತು ಸಮಾಜಸೇವೆ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ಇಲ್ಲಿನ ಓಕ್ ವುಡ್ ಇಂಡಿಯನ್ ಸ್ಕೂಲ್‌ನ ಪ್ರಿನ್ಸಿಪಾಲ್ ನೀತಾ ಎ. ಶೆಟ್ಟಿ ಯವರಿಗೆ ಶ್ರೇಷ್ಠ ಮಹಿಳಾ ಸಾಧಕಿ ಎಕನಾಮಿಕ್ಸ್ ಅವಾರ್ಡ್ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪತಿ ಉದ್ಯಮಿ ಅಭಿನಂದನ್ ಶೆಟ್ಟಿ ಅವರೊಂದಿಗೆ ಪ್ರಶಸ್ತಿ ಸ್ವೀಕರಿಸಿದರು.