ಮಾಬುಕಳ ಮೈಸೂರು ವಿಭಾಗ ಮಟ್ಟದ ಕ್ರಿಕೆಟ್ ಪಂದ್ಯಾಟಕ್ಕೆ ಡಾ.ರೋಶನ್ ಕುಮಾರ್ ಶೆಟ್ಟಿ ಚಾಲನೆ

0
283

ಕುಂದಾಪುರ ಮಿರರ್ ಸುದ್ದಿ…

ಕೋಟ :ಕ್ರೀಡೆಗೆ ಸರ್ಕಾರ ಒದಗಿಸುವ ಅನುದಾನ ತೀರ ಕಡಿಮೆ. ಖಾಸಗಿ ಶಿಕ್ಷಣ ಸಂಸ್ಥೆಗಳ ಸಹಭಾಗಿತ್ವದಲ್ಲಿ ಕ್ರೀಡೆಗೆ ಪ್ರೋತ್ಸಾಹ ದೊರಕುತ್ತಿರುವುದು ಶ್ಲಾಘನೀಯ ಎಂದು ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಹೇಳಿದರು.

ಬ್ರಹ್ಮಾವರ ತಾಲ್ಲೂಕಿನ ಮಾಬುಕಳದ ಚೇತನಾ ಪ್ರೌಢಶಾಲೆಯ ಬಿ.ಡಿ.ಶೆಟ್ಟಿ ಕ್ರೀಡಾಂಗಣದಲ್ಲಿ ಬುಧವಾರ ಜಿಲ್ಲಾಡಳಿತ, ಜಿ.ಪಂ, ಶಾಲಾ ಶಿಕ್ಷಣ ಇಲಾಖೆ, ಮೈಸೂರು ವಿಭಾಗದ ವಿಭಾಗೀಯ ಕಾರ್ಯದರ್ಶಿ, ಜಂಟಿ ನಿರ್ದೇಶಕ, ಉಡುಪಿ ಉಪನಿರ್ದೇಶಕರ ಕಚೇರಿ, ಬ್ರಹ್ಮಾವರ ಬಿ.ಇ.ಓ ಕಚೇರಿ, ಹಂಗಾರಕಟ್ಟೆ ಚೇತನಾ ಪ್ರೌಢಶಾಲೆ ಮತ್ತು ಬ್ರಹ್ಮಾವರ ತಾಲ್ಲೂಕು ಅಥ್ಲೇಟಿಕ್ಸ್ ಅಸೋಸಿಯೇಶನ್ ಆಶ್ರಯದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ 14, 17ರ ವಯೋಮಿತಿಯ ಬಾಲಕ/ಬಾಲಕಿಯರ ಕ್ರಿಕೆಟ್ ಪಂದ್ಯಾಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಹಂಗಾರಕಟ್ಟೆ ಸಾಮಾಜಿಕ, ಸಾಂಸ್ಕೃತಿಕ, ಶೈಕ್ಷಣಿಕ ಸಂಘದ ಅಧ್ಯಕ್ಷ ಭರತ್ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

Click Here

Click Here

ಇದಕ್ಕೂ ಮುನ್ನ ಸಾಸ್ತಾನದ ಶಿವಕೃಪಾ ಕಲ್ಯಾಣಮಂದಿರದಿಂದ ಚೇತನ ಪ್ರೌಢಶಾಲೆಯವರೆಗೆ ಮೆರವಣಿಗೆ ಏರ್ಪಡಿಸಲಾಯಿತು. ಬ್ರಹ್ಮಾವರ ಓ.ಎಸ್.ಸಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಫಾ.ಎಂ.ಸಿ ಮಥಾಯಿ ಟ್ರೋಫಿಗಳನ್ನು ಅನಾವರಣಗೊಳಿಸಿದರು.

ಬ್ರಹ್ಮಾವರ ತಾಲ್ಲೂಕು ಅಥ್ಲೇಟಿಕ್ಸ್ ಅಸೋಸಿಯೇಶನ್ ಗೌರವಾಧ್ಯಕ್ಷ ಬಾಲಕೃಷ್ಣ ಹೆಗ್ಡೆ, ಐರೋಡಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಗೀತಾ ಶೆಟ್ಟಿ, ಬ್ರಹ್ಮಾವರ ಬಿ.ಇ.ಓ ರಂಗನಾಥ್, ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ್ ಕಾಮತ್, ಇಬ್ರಾಹಿ ಸಾಹೇಬ್, ಚೇತನಾ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಕಲ್ಪನಾ ಶೆಟ್ಟಿ, ದೈಹಿಕ ಶಿಕ್ಷಕ ಹರ್ಷವರ್ಧನ ಶೆಟ್ಟಿ ಮತ್ತಿತರರು ಇದ್ದರು.

ಜಿಲ್ಲಾ ದೈಹಿ ಶಿಕ್ಷಣಾಧಿಕಾರಿ ಗೋಪಾಲ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ನಿವೃತ್ತ ಮುಖ್ಯ ಶಿಕ್ಷಕ ಗಣೇಶ್ ಜಿ ಕಾರ್ಯಕ್ರಮ ನಿರೂಪಿಸಿದರು.

Click Here

LEAVE A REPLY

Please enter your comment!
Please enter your name here