ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಉಡುಪಿ ಜಿ.ಪಂ., ಉಪನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ವಲಯ, ಸರಕಾರಿ ಪದವಿ ಪೂರ್ವ ಕಾಲೇಜು, ಪ್ರೌಢಶಾಲಾ ವಿಭಾಗ ಕುಂದಾಪುರ ಇವರ ಸಹಯೋಗದಲ್ಲಿ ಕುಂದಾಪುರದಲ್ಲಿ ಅ.26ರಿಂದ ಅ.28ರ ತನಕ ಕುಂದಾಪುರ ಗಾಂಧಿ ಮೈದಾನದಲ್ಲಿ ನಡೆಯಲಿರುವ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ಹಾಗೂ ವಿಕಲಚೇತನ ವಿದ್ಯಾರ್ಥಿಗಳ ಕ್ರೀಡಾಕೂಟ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕುಂದಾಪುರ ವಿಧಾನಸಭಾ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಅವರು ಸ್ಪರ್ಧೆಗಳಲ್ಲಿ ವಿದ್ಯಾರ್ಥಿಯ ಭಾಗವಹಿಸುವಿಕೆ, ಬಹುಮಾನದೆಡೆ ಗುರಿ ಇರಲಿ. ಸೋತರೆ ನಿರಾಸರಾಗುವುದು ಬೇಡ, ಪ್ರಯತ್ನ ನಿರಂತರವಾಗಿ ಸಾಗಲಿ. ಮುಂದೆ ಖಂಡಿತಾ ಯಶಸ್ಸು ಲಭಿಸಲಿ ಎಂದರು.
ಪಥ ಸಂಚಲನದ ಗೌರವ ವಂದನೆ ಸ್ವೀಕರಿಸಿ ಮಾತನಾಡಿದ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ ಅವರು ಮಾತನಾಡಿ ಕರಾವಳಿ ಜಿಲ್ಲೆಯಲ್ಲಿ ಕ್ರೀಡಾಸಾಧನೆ ಇನ್ನಷ್ಟು ವೃದ್ದಿಸಬೇಕು. ಆ ಹಿನ್ನೆಲೆಯಲ್ಲಿ ಭವಿಷ್ಯದ ಕ್ರೀಡಾಪಟುಗಳಾಗಿ ವಿದ್ಯಾರ್ಥಿಗಳು ತಮ್ಮ ಕ್ರೀಡಾಸಾಮಥ್ರ್ಯವನ್ನು ಈ ವೇದಿಕೆಯ ಮೂಲಕ ಪ್ರದರ್ಶಿಸಬೇಕು. ಇದು ಕ್ರೀಡಾಸ್ಪೂರ್ತಿಗೆ ಭದ್ರ ಬುನಾದಿಯಾಗಲಿ ಎಂದರು.
ಕುಂದಾಪುರ ಉಪ ವಿಭಾಗದ ಸಹಾಯಕ ಆಯುಕ್ತರಾದ ರಶ್ಮೀ ಎಸ್.ಆರ್ ಮಾತನಾಡಿ ಎಲ್ಲಾ ಕ್ರೀಡಾಳುಗಳು ಕ್ರೀಡಾಸ್ಪೂರ್ತಿಯಿಂದ ಆಟವಾಡಬೇಕು. ಸೋತರೆ ಮಾತ್ರ ಗೆಲುವಿನ ಅನುಭವವಾಗುತ್ತದೆ. ಮುಂದೆ ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಳ್ಳುವ ಕ್ಷೇತ್ರಗಳಿಗೆ ಇಂಥಹ ಕ್ರೀಡಾಕೂಟಗಳು ಮೆಟ್ಟಿಲುಗಳಾಗಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಕುಂದಾಪುರದ ಸೂಪರ್ ಗ್ರೇಡ್ ಎಲೆಕ್ಟ್ರಿಕಲ್ ಗುತ್ತಿಗೆದಾರರಾದ ಕೆ.ಆರ್.ನಾಯಕ್, ಉದ್ಯಮಿಗಳಾದ ದಾಂಡೇಲಿ ಪ್ರಕಾಶ್ ಶೆಟ್ಟಿ, ಪ್ರಕಾಶ್ ಶೆಟ್ಟಿ ಯಡ್ತಾಡಿ, ನಾಗರಾಜ ಶೆಟ್ಟಿ ಕೈಲಾಡಿ ಚಿತ್ತೂರು ಇವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಪುರಸಭೆ ಸದಸ್ಯರಾದ ಮೋಹನದಾಸ ಶೆಣೈ, ಪುರಸಭೆ ಮುಖ್ಯಾಧಿಕಾರಿ ಮಂಜುನಾಥ ಆರ್, ತಹಶೀಲ್ದಾರ್ ಶೋಭಾಲಕ್ಷ್ಮೀ, ಯುವಜನ ಕ್ರೀಡಾ ಇಲಾಖೆಯ ಕುಸುಮಾಕರ ಶೆಟ್ಟಿ, ಸ.ಪ.ಪೂ.ಕಾಲೇಜು ಕುಂದಾಪುರ ಇದರ ಪ್ರಾಂಶುಪಾಲರಾದ ರಾಮಕೃಷ್ಣ ಬಿ.ಜಿ., ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಕಿಶೋರ್ ಕುಮಾರ್, ಸ.ಪ.ಪೂ ಕಾಲೇಜು ಕುಂದಾಪುರದ ದೈ.ಶಿ.ಶಿಕ್ಷಕ ಪ್ರಕಾಶ್ಚಂದ್ರ ಶೆಟ್ಟಿ, ಎಸ್.ಡಿ.ಎಂ.ಸಿ ಅಧ್ಯಕ್ಷ ಸತೀಶ್ ಕುಮಾರ್, ಕುಂದಾಪುರದ ದೈ.ಶಿ.ಪರಿವೀಕ್ಷಣಾಧಿಕಾರಿ ರವೀಂದ್ರ ನಾಯಕ್, ಸ.ಪ.ಪೂ ಕಾಲೇಜು ಕುಂದಾಪುರ ಇದರ ಉಪಪ್ರಾಂಶುಪಾಲರಾದ ಕಿರಣ್ ಹೆಗ್ಡೆ ಕೆ., ಚಂದ್ರಶೇಖರ ಶೆಟ್ಟಿ, ಪ್ರಭಾಕರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳು ನಾಡಗೀತೆ ಹಾಡಿದರು. ಮಹಿಮಾ ಪ್ರತಿಜ್ಞಾವಿಧಿ ಭೋದಿಸಿದರು. ಸಾ.ಶಿ.ಇಲಾಖೆ ಉಪನಿರ್ದೇಶಕ ಗಣಪತಿ ಕೆ ಸ್ವಾಗತಿಸಿದರು. ಜಿಲ್ಲಾ ದೈಹಿಕ ಪರಿವೀಕ್ಷಣಾಧಿಕಾರಿ ಗೋಪಾಲ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಎಸ್.ಶೆಟ್ಟಿ ವಂದಿಸಿದರು. ಸತೀಶ್ಚಂದ್ರ ಶೆಟ್ಟಿ ಚಿತ್ರಪಾಡಿ ಕಾರ್ಯಕ್ರಮ ನಿರ್ವಹಿಸಿದರು.