ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಇಲ್ಲಿನ ಗಾಂಧಿ ಮೈದಾನದಲ್ಲಿ ನಡೆ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ವಂಡ್ಸೆ ಸ.ಮಾ.ಹಿ.ಪ್ರಾ.ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಶರಣ್ಯ ನೆಂಪು ಶಾಲಾ ಬಾಲಕಿಯರ ಗುಂಡು ಎಸೆತ ಸ್ಪರ್ಧೆಯಲ್ಲಿ 8.41 ಮೀಟರ್ ದೂರ ಎಸೆದು ದಾಖಲೆ ನಿರ್ಮಿಸುವುದರೊಂದಿಗೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಹಾಗೂ ಚಕ್ರ ಎಸೆತ ಸ್ಪರ್ಧೆಯಲ್ಲಿ 19.46 ಮೀಟರ್ ದೂರ ಎಸೆದು ದ್ವಿತೀಯ ಸ್ಥಾನ ಪಡೆದು ಎರಡು ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ ಆಗಿದ್ದಾರೆ.
ಶರಣ್ಯ ಗಜಾನನ ನೆಂಪು ಮತ್ತು ಹೇಮಾ ದಂಪತಿಯ ಪುತ್ರಿ. ಇವರಿಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ರಾಜು ಎನ್ ತರಬೇತಿ ನೀಡಿದ್ದಾರೆ.