ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ವಿಶ್ವ ಮೀನುಗಾರಿಕಾ ದಿನಾಚರಣೆಯ ಅಂಗವಾಗಿ ರಾಜ್ಯ ಸರಕಾರದಿಂದ ಕೊಡಮಾಡುವ ರಾಜ್ಯ ಪ್ರಶಸ್ತಿಯು ಬೀಜಾಡಿ ಮೀನುಗಾರರ ಸಹಕಾರಿ ಸಂಘಕ್ಕೆ ಲಭಿಸಿದೆ. ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ಬೀಜಾಡಿ ಮೀನುಗಾರರ ಸಹಕಾರಿ ಸಂಘಕ್ಕೆ ಈ ರಾಜ್ಯ ಮಟ್ಟದ ಪ್ರಶಸ್ತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಮೀನುಗಾರಿಕಾ ಮತ್ತು ಬಂದರು ಖಾತೆ ಸಚಿವ ಮಂಕಾಳ್ ಎಸ್.ವೈದ್ಯ,ಇಲಾಖೆಯ ನಿರ್ದೇಶಕರು ಮತ್ತು ಅಧಿಕಾರಿಗಳ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಬಿ.ಮಂಜುನಾಥ ಕುಂದರ್ ಚಾತ್ರಬೆಟ್ಟು, ಉಪಾಧ್ಯಕ್ಷ ರಾಜು ತೋಟದ ಬೆಟ್ಟು, ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಮೇಶ್ ಕೆ ಕಾಂಚನ್, ನಿರ್ದೇಶಕರಾದ ಬಿ. ಶೇಖರ್ ಮೊಗವೀರ ಅಂಕದಕಟ್ಟೆ, ಸಿಬ್ಬಂದಿಗಳಾದ ಗಣೇಶ್ ಮತ್ತು ಶ್ರೀಧರ್ ರವರು ಪ್ರಶಸ್ತಿ ಸ್ವೀಕರಿಸಿದರು.
ಮೀನುಗಾರಿಕೆ ಇಲಾಖೆಯಿಂದ ವಿಶ್ವ ಮೀನುಗಾರಿಕಾ ದಿನಾಚರಣೆಯ ಅಂಗವಾಗಿ ಈ ವಲಯಕ್ಕೆ ನೀಡಿದ ಕೊಡುಗೆ ಪರಿಗಣಿಸಿ, ಅತ್ಯುತ್ತಮ ಮೀನುಗಾರಿಕೆ ಸಹಕಾರ ಸಂಘಗಳನ್ನು ಹಾಗೂ ಪ್ರಗತಿ ಪರ ಮೀನುಕೃಷಿಕರಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ. ಅಲ್ಲದೇ ನವೆಂಬರ್ 18ರಂದು 70ನೇ ಅಖಿಲ ಭಾರತ ರಾಜ್ಯಮಟ್ಟದ ಸಹಕಾರಿ ಸಪ್ತಾಹದಲ್ಲಿ “ಅತ್ಯುತ್ತಮ ಮೀನುಗಾರರ ಸಹಕಾರಿ ಸಂಘ” ಪ್ರಶಸ್ತಿ ಕೂಡ ಬೀಜಾಡಿ ಮೀನುಗಾರರ ಸಹಕಾರಿ ಸಂಘಕ್ಕೆ ಲಭಿಸಿದೆ.