ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ : ಇಲ್ಲಿನ ಪೋರ್ಟ್ ಗೇಟ್ ಎಜ್ಯುಕೇಶನ್ ಟ್ರಸ್ಟ್‌ನ ಘಟಕವಾದ ಯುರೋಕಿಡ್ಸ್ ನ 20ನೇ ಮತ್ತು ಓಕ್ ವುಡ್ ಇಂಡಿಯನ್ ಸ್ಕೂಲಿನ 6ನೇಯ ವರ್ಷದ ವಾರ್ಷಿಕೋತ್ಸವವು ಡಿ.೨ರಂದು ಶಾಲಾ ಆವರಣದಲ್ಲಿ ನೆಡೆಯಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಕರ್ನಾಟಕ ಹಿಂದುಳಿದ ವರ್ಗ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಅವರು ವಹಿಸಿ ಕ್ರೀಡೆ ಮತ್ತು ಪತ್ಯೇತರ ಚಟುವಟಿಕೆಗೆ ಒತ್ತು ಕೊಡುತ್ತಿರುವುದು ಶ್ಲಾಘನೀಯ. ಹಾಗೆಯೇ ರಾಜಕೀಯ ವಿಷಯದ ಬಗ್ಗೆ ಮಕ್ಕಳಿಗೆ ಪರಿಚಯ ಇರಲಿ ಎಂದರು.
ವೇದಿಕೆಯಲ್ಲಿ ಪೋರ್ಟ್ ಗೇಟ್ ಎಜ್ಯುಕೇಶನ್ ಟ್ರಸ್ಟ್ ನ ಜಂಟಿ ಮ್ಯಾನೇಜಿಂಗ್ ಟ್ರಸ್ಟಿ ಮತ್ತು ಕಾರ್ಯದರ್ಶಿ ನೀತಾ ಶೆಟ್ಟಿ, ಮ್ಯಾನೇಜಿಂಗ್ ಟ್ರಸ್ಟಿ ಅಭಿನಂದನ್ ಶೆಟ್ಟಿ, ಟ್ರಸ್ಟಿ ಅರುಣ್ ಕುಮಾರ್ ಶೆಟ್ಟಿ ಮತ್ತು ಶಾಲಾ ಆಡಳಿತಾಧಿಕಾರಿ ಸಹನಾ ಶೆಟ್ಟಿ, ಪ್ರಾಂಶುಪಾಲರಾದ ಜ್ಯೋತಿ ಸುರೇಶ್ ಉಪಸ್ಥಿತರಿದ್ದರು.
ಕಾರ್ಯಕ್ರಮವು ದೇವಿಸ್ತುತಿ ನೃತ್ಯದ ಮೂಲಕ ಪ್ರಾರಂಭವಾಯಿತು. ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ನಿರ್ವಹಿಸಿದರು.
ಪೋರ್ಟ್ ಗೇಟ್ ಎಜ್ಯುಕೇಶನ್ ಟ್ರಸ್ಟ್ ನ ಜಂಟಿ ಮ್ಯಾನೇಜಿಂಗ್ ಟ್ರಸ್ಟಿ ಮತ್ತು ಕಾರ್ಯದರ್ಶಿ ನೀತಾ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಅಭಿನಂದನ್ ಶೆಟ್ಟಿಯವರು ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಶುಭ ಹಾರೈಸಿದರು. ಪ್ರಾಂಶುಪಾಲರಾದ ಜ್ಯೋತಿ ಸುರೇಶ್ ವರದಿ ವಾಚಿಸಿದರು.