ಕುಂದಾಪುರ ಮಿರರ್ ಸುದ್ದಿ…
ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಳಕ್ಕೆ ಗೃಹ ಸಚಿವ ಅರಗಾ ಜ್ಞಾನೇಂದ್ರ ಕುಟುಂಬ ಸಮೇತರಾಗಿ ಭೇಟಿ ನೀಡಿ, ಮೂಕಾಂಬಿಕೆಯ ದರ್ಶನ ಪಡೆದರು.
ನಂತರ ದೇವಳದ ಪ್ರಧಾನ ಅರ್ಚಕ ಶ್ರೀಧರ್ ಅಡಿಗ ಅವರ ನೇತ್ರತ್ವದಲ್ಲಿ ದೇವಳದ ವಿಶೇಷ ಪೂಜೆ ಚಂಡಿಕಾ ಹೋಮದಲ್ಲಿ ಭಾಗಿಯಾದರು. ದೇವಳದ ಆಡಳಿತ ಮಂಡಳಿಯಿಂದ ಸಚಿವರನ್ನು ಗೌರವಿಸಲಾಯಿತು.
ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಕೆರಾಡಿ ಉಪಸ್ಥಿತರಿದ್ದರು.