ಕುಂದಾಪುರ ಮಿರರ್ ಸುದ್ದಿ…
ಕೋಟ: ಪ್ರತಿ ವರ್ಷದಂತೆ ಶ್ರೀ ಅಘೋರೇಶ್ವರ ಕಲಾರಂಗದ ವತಿಯಿಂದ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಕೊಡಮಾಡುತ್ತಿರುವ ಶ್ರೀ ಅಘೋರೇಶ್ವರ ರಾಜ್ಯೋತ್ಸವ ಪ್ರಶಸ್ತಿಗೆ ಈ ಬಾರಿ ಸಮಾಜ ಸೇವಕ, ಖ್ಯಾತ ಮುಳುಗುತಜ್ಞ ಈಶ್ವರ ಮಲ್ಪೆ ಯವರನ್ನು ಆಯ್ಕೆ ಗೊಳಿಸಲಾಗಿದ್ದು ನವೆಂಬರ್ 13ರಂದು ಸಂಜೆ ಸಾಲಿಗ್ರಾಮದ ಕಾರ್ತಟ್ಟು ಶ್ರೀ ಅಘೋರೇಶ್ವರ ಸಭಾಭವನದಲ್ಲಿ ನಡೆಯುವ ಕನ್ನಡ ರಾಜ್ಯೋತ್ಸವ ಆಚರಣೆಯ ಕಾರ್ಯಕ್ರಮದಲ್ಲಿ ಸಮಾಜದ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿಯನ್ನು ನೀಡಲಿದೆ ಎಂದು ಕಲಾ ರಂಗದ ಕಾರ್ಯದರ್ಶಿ ನಾಗರಾಜ್ ಐತಾಳ್ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.