ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ನೂತನ ಆಡಳಿತ ಅಧಿಕಾರಿಯಾಗಿ ಕುಂದಾಪುರ ಉಪ ವಿಭಾಗಾಧಿಕಾರಿ ರಶ್ಮಿ ಎಸ್ಆರ್ ಅಧಿಕಾರ ಸ್ವೀಕರಿಸಿದ್ದಾರೆ. ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಶೆಟ್ಟಿ ನೂತನ ಆಡಳಿತ ಅಧಿಕಾರಿ ರಶ್ಮಿಯವರಿಗೆ ಅಧಿಕಾರ ಹಸ್ತಾಂತರಿಸಿ ಸನ್ಮಾನಿಸಲಾಯಿತು.
ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅವಧಿ ಮುಕ್ತಾಯಗೊಂಡಿದ್ದು ಈ ಹಿಂದೆ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿದ್ದ ಕೆರಾಡಿ ಚಂದ್ರಶೇಖರ್ ಶೆಟ್ಟಿ ಅವರ ಅಧಿಕಾರವನ್ನು ಈಗ ಸರ್ಕಾರ ಮತ್ತು ಮುಜರಾಯಿ ಇಲಾಖೆ ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ ಎಸ್ಆರ್ ಅವರಿಗೆ ವಹಿಸಿದೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಕೆರಾಡಿ ಚಂದ್ರಶೇಖರ ಶೆಟ್ಟಿ, ಕೊಲ್ಲೂರು ದೇವಸ್ಥಾನದ ಹಿಂದಿನ ಆಡಳಿತ ಸಮಿತಿ ಆರು ತಿಂಗಳ ತಡವಾಗಿ ರಚನೆಗೊಂಡಿದ್ದು ಅದರ ಪ್ರಕಾರ ವ್ಯವಸ್ಥಾಪನ ಸಮಿತಿಯ ಅವಧಿಯನ್ನು ಇನ್ನು ಆರು ತಿಂಗಳ ಅವಧಿಗೆ ಸರ್ಕಾರ ವಿಸ್ತರಿಸಬೇಕಿತ್ತು. ಗೋಳಿಹೊಳೆಯಲ್ಲಿ ಗೋಶಾಲೆ ನಿರ್ಮಾಣಕ್ಕೆ ಭೂಮಿ ಮಂಜೂರಾಗಿದ್ದು ಅದನ್ನು ವ್ಯವಸ್ಥಿತವಾಗಿ ನಿರ್ಮಾಣಗೊಳಿಸಲು ಅವಕಾಶ ಸಿಕ್ಕಿದಂತಾಗುತ್ತಿತ್ತು. ಈ ಬಗ್ಗೆ ಸಂಬಂಧಪಟ್ಟವರ ಗಮನಕ್ಕೆ ತರಲಾದರೂ ಯಾವುದೇ ಪ್ರಯೋಜನವಾಗಿಲ್ಲ ಎಂದಿದ್ದಾರೆ.