ಕುಂದಾಪುರ ಮಿರರ್ ಸುದ್ದಿ…
ಕೋಟ: ಶ್ರೀ ಶಾಂತಿಮತೀ ಪ್ರತಿಷ್ಠಾನದ ದಶಮಾನೋತ್ಸವದ ಅಂಗವಾಗಿ ಹಮ್ಮಿಕೊಂಡ ಕೋಟಿ ಗಾಯತ್ರೀ ಹಾಗೂ ಲಕ್ಷ ಲಲಿತಾ ಸಹಸ್ರನಾಮ ಮಹಾಯಾಗವು ಯಶಸ್ವೀಯಾಗಿ ಸಂಪನ್ನಗೊಂಡ ಹಿನ್ನೆಲೆಯಲ್ಲಿ ಕೃತಜ್ಞತಾ ಸಭೆಯನ್ನು ಭಾನುವಾರ ಕೋಟ ಮಾಂಗಲ್ಯ ಮಂದಿರದಲ್ಲಿ ನಡೆಸಲಾಯಿತು.
ಮಹಾಯಾಗದ ಸಂದರ್ಭದಲ್ಲಿ ಸಹಕರಿಸಿದ ಮಹಾನೀಯರಿಗೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಯಿತು. ಸಭೆಯಲ್ಲಿ ಪ್ರಮುಖರು ತಮ್ಮ ತಮ್ಮ ಅಭಿಪ್ರಾಯ ಸಲ್ಲಿಸಿದರು.
ವೇದಿಕೆಯಲ್ಲಿ ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮದ ಅಧ್ಯಕ್ಷ ಶಿವರಾಮ ಉಡುಪ, ಕೋಟ ಹಿರೇಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಮಂಡಳಿಯ ಅಧ್ಯಕ್ಷ ಗಣೇಶ ಭಟ್, ಶ್ರೀ ಶಾಂತಿಮತೀ ಪ್ರತಿಷ್ಠಾನದ ಅಧ್ಯಕ್ಷ ಸಚ್ಚಿದಾನಂದ ಅಡಿಗ ಉಪಸ್ಥಿತರಿದ್ದರು. ಪ್ರತಿಷ್ಠಾನದ ಮಾಜಿ ಅಧ್ಯಕ್ಷ ಪ್ರಸನ್ನ ಭಟ್ ಸ್ವಾಗತಿಸಿದರು. ಕೋಟಿ ಗಾಯತ್ರೀ ಮಹಾಯಾಗ ಸಮಿತಿ ಅಧ್ಯಕ್ಷ ವಿದ್ವಾನ್ ಡಾ| ವಿಜಯ ಮಂಜರ್ ಧನ್ಯವಾದಗೈದರು.ಕಾರ್ಯಕ್ರಮವನ್ನು ಮಾಜಿ ಅಧ್ಯಕ್ಷ ರಾಮಚಂದ್ರ ಉಡುಪ ನಿರೂಪಿದರು.