ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಕೊಬ್ಬರಿಗೆ ಕನಿಷ್ಟ ಬೆಂಬಲ ಬೆಲೆಯನ್ನು ಹೆಚ್ಚಳ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಸ್ವಾಗತಿಸಿದ್ದಾರೆ.
ಕೊಬ್ಬರಿ ಧಾರಣೆ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿರುವ ತೆಂಗು ಬೆಳೆಗಾರರಿಗೆ ಕೇಂದ್ರ ಸರಕಾರದ ಈ ನಿರ್ಧಾರ ನೆರವಾಗಲಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಚಿವ ಸಂಪುಟ ಸಭೆಯು ದೇಶದ ತೆಂಗು ಬೆಳೆಗಾರರ ಸಂಕಷ್ಟವನ್ನು ಅರಿತು ಬೆಂಬಲ ಬೆಲೆ ಹೆಚ್ಚಿಸುವ ನಿರ್ಧಾರವನ್ನು ತನ್ನ ಸಚಿವ ಸಂಪುಟ ಸಭೆಯಲ್ಲಿ ಅಂಗೀರಿಕರಿಸಿದೆ. ಮೋದಿ ಸರ್ಕಾರದ ಈ ನಿರ್ಧಾರದಿಂದ ಕರಾವಳಿ ಸಹಿತ ದೇಶದ ತೆಂಗು ಬೆಳೆಗಾರರ ಮೊಗದಲ್ಲಿ ಸಂತಸ ಮೂಡಿಸಿದೆ ಎಂದು ಅವರು ತಮ್ಮ ಪ್ರಕರಕಟಣೆಯಲ್ಲಿ ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ಗಿರಣಿ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು ಪ್ರತೀ ಕ್ವಿಂಟಾಲ್ಗೆ 300 ರೂಪಾಯಿ ಹಾಗೂ ಉಂಡೆ ಕೊಬ್ಬರಿಯ ಎಂಎಸ್ಪಿಯನ್ನು ಕ್ವಿಂಟಾಲ್ಗೆ 250 ರೂಪಾಯಿಗೆ ಏರಿಕೆ ಮಾಡಿದೆ. ಬುಧವಾರ ನಡೆದ ಕೇಂದ್ರ ಸರ್ಕಾರದ ಸಂಪುಟ ಸಮಿತಿ ಸಭೆಯಲ್ಲಿಈ ತೀರ್ಮಾನ ಕೈಗೊಳ್ಳಲಾಗಿದೆ. ಇದರೊಂದಿಗೆ 2024ನೇ ಋುತುವಿಗೆ ಮಿಲ್ಲಿಂಗ್ ಕೊಬ್ಬರಿಯ ಕನಿಷ್ಠ ಬೆಲೆಯು ಕ್ವಿಂಟಾಲ್ಗೆ 11,160 ರೂಪಾಯಿಗಳಿಗೆ ಹೆಚ್ಚಳಗೊಂಡಿದೆ. ಇದೇ ವೇಳೆ ಉತ್ತಮ ಗುಣಮಟ್ಟದ ಉಂಡೆ ಕೊಬ್ಬರಿಯ ಬೆಲೆ 12,000 ರೂಪಾಯಿಗಳಿಗೆಗೆ ಏರಿಕೆಯಾಗಿದೆ.