ಕುಂದಾಪುರ ಮಿರರ್ ಸುದ್ದಿ…
ಕೋಟ: ಕೋಟತಟ್ಟು ಗ್ರಾಮ ಪಂಚಾಯತ್, ಡಾ. ಶಿವರಾಮ ಕಾರಂತ ಪ್ರತಿಷ್ಠಾನ (ರಿ) ಕೋಟ ಅವರ ಆಶ್ರಯದಲ್ಲಿ ನಡೆಯುವ ಉಡುಪಿ ದಕ್ಷಿಣ ಕನ್ನಡ ಜಿಲ್ಲೆಗಳ ಪಂಚಾಯತ್ ರಾಜ್ ಮತ್ತು ನಗರ ಸ್ಥಳೀಯಾಡಳಿತ ಪ್ರತಿನಿಧಿಗಳ ಕ್ರೀಡೋತ್ಸವ – ಸಾಂಸ್ಕೃತಿಕ ಸ್ಪರ್ಧೆ ಹೊಳಪು-2024( ಗ್ರಾಮ ಸರಕಾರದ ದಿಬ್ಬಣ) ಕಾರ್ಯಕ್ರಮದ ಪೋಸ್ಟರ್ ಅನ್ನು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರು ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್‍ನಲ್ಲಿ ಅನಾವರಣಗೊಳಿಸಿದರು.
ಜನಪ್ರತಿನಿಧಿಗಳು ಎಲ್ಲ ಒತ್ತಡಗಳನ್ನು ಮರೆತು, ಪಕ್ಷ ಭೇಧದ ಹಂಗಿಲ್ಲದೇ ನಾವೆಲ್ಲರೂ ಒಂದೇ ಎಂದು ಸೇರುವ ಕಾರ್ಯಕ್ರಮ ಹೊಳಪು. ಫೆಬ್ರವರಿ 10 ರಂದು ಕೋಟದ ವಿವೇಕ ವಿದ್ಯಾ ಸಂಸ್ಥೆಯ ಆವರಣದಲ್ಲಿ ಕಾರ್ಯಕ್ರಮ ನಡೆಯಲಿದ್ದು ಎಲ್ಲ ಗ್ರಾಮ ಪಂಚಾಯತ್ ಪ್ರತಿನಿಧಿಗಳು, ನಗರ ಸ್ಥಳೀಯಾಡಳಿತ ಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸಂಭ್ರಮದಿಂದ ಭಾಗವಹಿಸಿ ಕಾರ್ಯಕ್ರಮ ಯಶಸ್ಸುಗೊಳಿಸಬೇಕೆಂದು ವಿನಂತಿಸಿದರು.
ಈ ಸಂದರ್ಭದಲ್ಲಿ ಡಾ. ಶಿವರಾಮ ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ್ ಸಿ ಕುಂದರ್, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ ಸತೀಶ್ ಕುಂದರ್, ಪಿ.ಡಿ.ಓ ರವೀಂದ್ರ ರಾವ್ ಹಾಗೂ ಪಂಚಾಯತ್ ಸದಸ್ಯರು ಪ್ರತಿಷ್ಠಾನದ ಸದಸ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.