ಕುಂದಾಪುರ ಮಿರರ್ ಸುದ್ದಿ…
ಕೋಟ: ಕೋಟತಟ್ಟು ಗ್ರಾಮ ಪಂಚಾಯತ್‍ನಲ್ಲಿ ವಸತಿ ಯೋಜನೆಯ ಫಲಾನುಭವಿಗಳಿಗೆ ಮಂಜೂರಾತಿ ಆದೇಶ ಪತ್ರ ವಿತರಣೆ ಹಾಗೂ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಮಾಹಿತಿ ಕಾರ್ಯಗಾರ ಹಾಗೂ ರೋಜ್‍ಗಾರ್ ದಿನಾಚರಣೆಯನ್ನು ಜ.9ರ ಮಂಗಳವಾರ ಕಾರಂತ ಥೀಂ ಪಾರ್ಕನಲ್ಲಿ ಜರಗಿತು.
ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ.ಸತೀಶ್ ಕುಂದರ್ ಬಾರಿಕೆರೆ ಅವರ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಅತಿ ಹೆಚ್ಚು ಮಾನವ ದಿನ ಸೃಜಿಸಿ ಸತತ ಎರಡನೇ ಬಾರಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದು ಮುಂದಿನ ದಿನಗಳಲ್ಲಿ ಸಹ ಮುಂದುವರೆಯುವ ಬಗ್ಗೆ ತಿಳಿಸಿದರು ಹಾಗೂ ವಯಕ್ತಿಕ ಕಾಮಗಾರಿಗಳಿಗೆ ಅರ್ಜಿ ಸಲ್ಲಿಸಲು ಮನವಿ ಮಾಡಿದರು.
ಗೀತಾನಂದ ಫೌಂಡೇಶನ್‍ನ ಪ್ರವರ್ತಕ ಆನಂದ್.ಸಿ ಕುಂದರ್ ಅವರು ವಸತಿ ಯೋಜನೆಯ ಫಲಾನುಭವಿಗಳಿಗೆ ಮಂಜೂರಾತಿ ಆದೇಶ ಪತ್ರ ವಿತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಸರಸ್ವತಿ, ಸದಸ್ಯರಾದ ವಾಸು ಪೂಜಾರಿ, ಪ್ರಕಾಶ್ ಹಂದಟ್ಟು, ರವೀಂದ್ರ ತಿಂಗಳಾಯ, ರಾಬರ್ಟ್ ರೋಡ್ರಿಗಸ್, ಅಶ್ವಿನಿ, ವಿದ್ಯಾ ಪಿ, ಸೀತಾ, ಕಂದಾಯ ನಿರೀಕ್ಷಕರಾದ ಮಂಜುನಾಥ ಬಿಲ್ಲವ, ಗ್ರಾಮ ಆಡಳಿತಾಧಿಕಾರಿ ರಾಘವೇಂದ್ರ, ಎಂ.ಜಿ.ಎನ್.ಆರ್.ಇ.ಜಿ.ಎ ತಾಲೂಕು ಸಂಯೋಜಕರಾದ ಅಕ್ಷಯ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.