ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ : ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ, ಲಯನ್ಸ್ ಕ್ಲಬ್ ಕುಂದಾಪುರ ಅಮೃತಧಾರಾ ಹಾಗೂ ಕ್ಲೀನ್ ಕುಂದಾಪುರ ಪ್ರಾಜೆಕ್ಟ್ ಈ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಪ್ರವಾಸಿಗರ ಅನುಕೂಲಕ್ಕಾಗಿ ಕೋಡಿ ಚಕ್ರೇಶ್ವರಿ ದೇವಸ್ಥಾನದ ಸಮೀಪದ ಕಡಲ ತೀರದಲ್ಲಿ ಅಳವಡಿಸಲಾದ ಸಿಮೆಂಟ್ ಬೆಂಚುಗಳನ್ನು ಲಯನ್ಸ್ ಸಂಸ್ಥೆಯ ಮಾಜಿ ಜಿಲ್ಲಾ ಗವರ್ನರ್ ನೀಲಕಾಂತ ಎಂ ಹೆಗಡೆ ಮತ್ತು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕುಂದಾಪುರದ ಸಭಾಪತಿ ಜಯಕರ್ ಶೆಟ್ಟಿ ಉದ್ಘಾಟಿಸಿದರು.
ಈ ಸಂದರ್ಭ ಮಾತನಾಡಿದ ನೀಲಕಾಂತ ಎಂ ಹೆಗಡೆ, “ಲಯನ್ಸ್ ಕ್ಲಬ್ ಕುಂದಾಪುರ ಅಮೃತಧಾರಾ ಹಾಗೂ ರೆಡ್ ಕ್ರಾಸ್ ಸಂಸ್ಥೆ ಕಡಲ ಕಿನಾರೆಯಲ್ಲಿ ಸಾರ್ವಜನಿಕರು ಆರಾಮವಾಗಿ ಕುಳಿತು ಪ್ರಕೃತಿಯನ್ನು ವೀಕ್ಷಿಸಲು ಹಾಗೂ ಉತ್ತಮ ಗಾಳಿ ಸವಿಯಲು ಅನುಕೂಲವಾಗುವಂತೆ ಉತ್ತಮ ದರ್ಜೆಯ ಆಸನಗಳನ್ನು ಸಮಾಜಕ್ಕೆ ಕೊಡುಗೆಯನ್ನು ನೀಡಿರುವುದು ಪ್ರಶಂಸನೀಯ. ಈಗಾಗಲೇ ಲಯನ್ಸ್ ಕ್ಲಬ್ ಕುಂದಾಪುರ ಅಮೃತಧಾರಾ, ರೆಡ್ ಕ್ರಾಸ್ ಸಂಸ್ಥೆ ಹಾಗೂ ಕ್ಲೀನ್ ಕುಂದಾಪುರ ಪ್ರಾಜೆಕ್ಟ್ ಪರಿಸರ ಸಂರಕ್ಷಣೆಯಲ್ಲಿ ಅದ್ಭುತವಾದ ಕ್ರಾಂತಿಯನ್ನ ಮಾಡಿ ಸಮಾಜಕ್ಕೆ ಉತ್ತಮ ಸಂದೇಶವನ್ನು ನೀಡುತ್ತಿದೆ” ಎಂದರು.
ರೆಡ್ ಕ್ರಾಸ್ ಸಭಾಪತಿ ಜಯಕರ್ ಶೆಟ್ಟಿ ಮಾತನಾಡಿ, “ಮುಂದಿನ ದಿನಗಳಲ್ಲಿ ಕೂಡ ರೆಡ್ ಕ್ರಾಸ್ ಸಂಸ್ಥೆಯು ಕಾರ್ಯ ಚಟುವಟಿಕೆಗಳಲ್ಲಿ ಲಯನ್ಸ್ ಕ್ಲಬ್ ಅಮೃತಧಾರ ಹಾಗೂ ಕ್ಲೀನ್ ಕುಂದಾಪುರ ಪ್ರಾಜೆಕ್ಟ್ ಜೊತೆ ಗೂಡಿ ಕಾರ್ಯಕ್ರಮಗಳನ್ನ ಸಂಯೋಜಿಸಲಾಗುವಬುದು.” ಎಂದರು. ಕೋಡಿ ಚಕ್ರೇಶ್ವರಿ ದೇವಸ್ಥಾನದ ಆಡಳಿತ ಮುಖ್ಯಸ್ಥರಾದ ಶ್ರೀ ಗೋಪಾಲ್ ಪೂಜಾರಿ ಅವರ ಕೋರಿಕೆಯಂತೆ ಅದೇ ಸ್ಥಳದಲ್ಲಿ ಆಸುಪಾಸಿನ ಸಾರ್ವಜನಿಕ ಶೌಚಾಲಯ ಸ್ಥಾಪಿಸುವಂತೆ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ, ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ರೆಡ್ ಕ್ರಾಸ್ ಸಂಸ್ಥೆ ಹಾಗೂ ಲಯನ್ಸ್ ಕ್ಲಬ್ ಜೊತೆಯಾಗಿ ಅಗತ್ಯ ಶೌಚಾಲಯ ನಿರ್ಮಾಣದ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಹೇಳಿದರು.
ಈ ಸಂದರ್ಭ ಲಯನ್ಸ್ ಜಿಲ್ಲಾ ಸಂಪುಟ ಕಾರ್ಯದರ್ಶಿ ರವಿರಾಜ್ ನಾಯಕ್ ಜಿ ಎಮ್ ಟಿ ಕೋ-ಆರ್ಡಿನೇಟರ್ ಅರುಣ್ ಕುಮಾರ್ ಹೆಗಡೆ, ಲಯನ್ಸ್ ಪ್ರಾಂತ ಅಧ್ಯಕ್ಷ ಏಕನಾಥ್ ಬೋಳಾರ್, ವಲಯಾಧ್ಯಕ್ಷ ನವೀನ್ ಶೆಟ್ಟಿ, ರೆಡ್ ಕ್ರಾಸ್ ಕಾರ್ಯದರ್ಶಿ ಸೀತಾರಾಮ್ ಶೆಟ್ಟಿ, ಖಜಾಂಜಿ ಶಿವರಾಂ ಶೆಟ್ಟಿ, ಕುಂದಾಪುರ ರೈಲು ಪ್ರಯಾಣಿಕರ ಹಿತರಕ್ಷಣ ಸಮಿತಿ ಅಧ್ಯಕ್ಷ ಗಣೇಶ್ ಪುತ್ರನ್, ಲಯನ್ಸ್ ಸಂಪುಟ ಸದಸ್ಯರಾದ ರಮಾ ಬೋಳಾರ್, ಸರಸ್ವತಿ ಪುತ್ರನ್, ಕೋಡಿ ಶಂಕರ ಪೂಜಾರಿ, ಕ್ಲೀನ್ ಕುಂದಾಪುರ ಪ್ರಾಜೆಕ್ಟ್ ನ ಸಂಚಾಲಕ ಭರತ್ ಬಂಗೇರ ಹಾಗೂ ಸದಸ್ಯರು, ಕೊಲ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಶೈಲೇಶ್,ಲಯನ್ಸ್ ಕ್ಲಬ್ ಕುಂದಾಪುರ ಅಮೃತಧಾರಾದ ಸದಸ್ಯರು ಉಪಸ್ಥಿತರಿದ್ದರು. ಆರಂಭದಲ್ಲಿ ಲಯನ್ಸ್ ಕ್ಲಬ್ ಅಧ್ಯಕ್ಷೆ ಆಶಾ ಶಿವರಾಮ ಶೆಟ್ಟಿ ಸ್ವಾಗತಿಸಿ ಕಲ್ಪನಾ ಭಾಸ್ಕರ್ ವಂದಿಸಿದರು. ಚಂದ್ರಿಕಾ ಧನ್ಯ ಹಾಗೂ ಸುಮ ಶ್ರೀ ಧನ್ಯ ಕಾರ್ಯಕ್ರಮ ನಿರೂಪಿಸಿದರು