ಕೋಟದ ಪಂಚವರ್ಣದ ರೈತರೆಡೆಗೆ 34ನೇ ಸರಣಿ ಕಾರ್ಯಕ್ರಮ
ಕೋಟ: ಪ್ರಸ್ತುತ ವಿದ್ಯಮಾನಗಳಲ್ಲಿ ಸಮಗ್ರ ಕೃಷಿ ನೀತಿ ಅನುಸರಿಸಬೇಕು ಆ ಮೂಲಕ ಯಶಸ್ಸುಗಳಿಸಲು ಸಾಧ್ಯವಿದೆ ಮೊಳಹಳ್ಳಿಯ ಯುವ ಕೃಷಿಕ ಪ್ರವೀಣ್ ಕುಲಾಲ್ ಹೇಳಿದರು.
ಶುಕ್ರವಾರ ಕೋಟದ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೆಳೆಯರ ಬಳಗ ಕಾರ್ಕಡ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮದ, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ, ಗೀತಾನಂದ ಫೌಂಡೇಶನ್ ಮಣೂರು , ರೈತಧ್ಚನಿ ಸಂಘ ಕೋಟ ಸಹಯೋಗದೊಂದಿಗೆ ರೈತರೆಡೆಗೆ ನಮ್ಮ ನಡಿಗೆ 34ನೇ ಸರಣಿ ಕಾರ್ಯಕ್ರಮದ ಅಂಗವಾಗಿ ಕುಂದಾಪುರ ತಾಲೂಕಿನ ಮೊಳಹಳ್ಳಿಯ ಯುವ ಕೃಷಿಕ ಪ್ರವೀಣ್ ಕುಲಾಲ್ ಗೌರವ ಸ್ವೀಕರಿಸಿ ಮಾತನಾಡಿ ಕೃಷಿ ಕಾಯಕದಲ್ಲಿ ಕಷ್ಟ ನಷ್ಟಗಳು ನೋವು ನಲಿವುಗಳು ಇರುವುದು ಸಹಜ ಆದರೆ ನಷ್ಟವಾಯಿತು ಎಂದು ದೃತಿಗೆಡಬಾರದು ಒಂದೇ ರೀತಿಯ ಕೃಷಿ ನೀತಿಯಿಂದ ಹೊರಬಂದು ಎಲ್ಲಾ ರೀತಿಯ ಆಧುನಿಕ ಕೃಷಿ ನೀತಿಗೆ ಒಗ್ಗಿಕೊಳ್ಳಬೇಕು ,ಯುವ ಸಮುದಾಯ ಹೆಚ್ಚು ಹೆಚ್ಚು ಕೃಷಿಯಲ್ಲಿ ಮುಂಚೂಣಿಗೆ ನಿಲ್ಲಬೇಕು,ಈ ದೇಶಕ್ಕೆ ಜೈ ಜವಾನ್ ಜೈ ಕಿಸಾನ್ ಧ್ಯೇಯದೊಂದಿಗೆ ಮೊದಲು ರೈತ ಸಮುದಾಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಆ ಮೂಲಕ ಕೃಷಿ ಅವಲಂಬಿತ ರಾಷ್ಟ್ರವಾಗಿ ಸದಾ ನಿಲ್ಲಬೇಕು ಎಂದು ಕರೆ ಇತ್ತರು.
ಕುಂದಾಪು ಕೃಷಿ ಇಲಾಖೆ ತಾಂತ್ರಿಕ ಸಹಾಯಕ ಅಧಿಕಾರಿ ಋಮಿತಾ ಮಾತನಾಡಿ ಪ್ರವೀಣ್ ಕುಲಾಲ್ ಯುವ ಸಮುದಾಯಕ್ಕೆ ಮಾದರಿ ಕೃಷಿಕರಾಗಿ ಹೊರಹೊಮ್ಮಿದ್ದಾರೆ. ಹೊಸ ಹೊಸ ಆವಿಷ್ಕಾದರ ಮೂಲಕ ಕೃಷಿ ಕ್ಷೇತ್ರದಲ್ಲಿ ಅದು ಗ್ರಾಮೀಣ ಭಾಗದ ಈ ಪ್ರದೇಶದಲ್ಲಿ ಹೊಸ ಭಾಷ್ಯ ಬರೆಯಲು ಹೊರಟಿದ್ದಾರೆ.ಸರಕಾರದಿಂದ ಸಿಗುವ ಯೋಜನೆಗಳನ್ನು ಸದ್ಭಳಕೆ ಮಾಡಿಕೊಳ್ಳವ ಮೂಲಕ ಕೃಷಿ ಕಾಯಕದಲ್ಲಿ ಸ್ವಾವಲಂಬಿ ಬದುಕು ಕಾಣುತ್ತಿದ್ದಾರೆ ಎಂದು ತಮ್ಮ ಆಶಯ ವ್ಯಕ್ತಪಡಿಸಿ ಪಂಚವರ್ಣ ಸಂಸ್ಥೆಯ ರೈತರನ್ನು ಗುರುತಿಸುವ ಸಾಮಾಜಿಕ ಕಾರ್ಯಕ್ಕೆ ಅಭಿನಂದನೆ ಸಲ್ಲಿಸಿದರು.
ಇದೇ ವೇಳೆ ಕೃಷಿ ಪರಿಕರವನ್ನಿಟ್ಟು ಪ್ರವೀಣ್ ಕುಲಾಲ್ ಮೊಳಹಳ್ಳಿಯವರನ್ನು ಪಂಚವರ್ಣ ಸಾಧಕ ಕೃಷಿ ಪುರಸ್ಕಾರ ನೀಡಿ ಗೌರವಿಸಲಾಯಿತು.
ಸಭೆಯ ಅಧ್ಯಕ್ಷತೆಯನ್ನು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್ ವಹಿಸಿದ್ದರು.
ಮುಖ್ಯ ಅಭ್ಯಾಗತರಾಗಿ ಯುವ ನ್ಯಾಯವಾದಿ ಚಂದ್ರ ಪೂಜಾರಿ ತೆಕ್ಕಟ್ಟೆ, ಕೋಟದ ರೈತಧ್ವನಿ ಸಂಘದ ಅಧ್ಯಕ್ಷ ಎಂ ಜಯರಾಮ ಶೆಟ್ಟಿ, ಗೆಳೆಯರ ಬಳಗ ಕಾರ್ಕಡ ಅಧ್ಯಕ್ಷ ಕೆ.ತಾರಾನಾಥ ಹೊಳ್ಳ,ಪಂಚವರ್ಣದ ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಪಂಚವರ್ಣ ಮಹಿಳಾ ಮಂಡಲದ ಪ್ರಧಾನ ಕಾರ್ಯದರ್ಶಿ ವಸಂತಿ ಹಂದಟ್ಟು, ಪಂಚವರ್ಣದ ಪದಾಧಿಕಾರಿಗಳು ಮತ್ತಿರರು ಉಪಸ್ಥಿತರಿದ್ದರು.
ಪಂಚವರ್ಣದ ಕಾರ್ಯದರ್ಶಿ ಶಕೀಲ ಎನ್ ಪೂಜಾರಿ ಸ್ವಾಗತಿಸಿದರೆ, ಸಂಚಾಲಕಿ ಸುಜಾತ ಎಂ ಬಾಯರಿ ಪ್ರಾಸ್ತಾವನೆ ಸಲ್ಲಿಸಿ ನಿರೂಪಿಸಿದರು. ಪಂಚವರ್ಣದ ಸದಸ್ಯ ಕೇಶವ ಆಚಾರ್ ವಂದಿಸಿದರು. ಕಾರ್ಯಕ್ರಮವನ್ನು ಪಂಚವರ್ಣದ ಕಾರ್ಯಾಧ್ಯಕ್ಷ ರವೀಂದ್ರ ಕೋಟ ಸಂಯೋಜಿಸಿದರು.
ವಿಶೇಷತೆ
ಇದೇ ಮೊದಲಬಾರಿಗೆ ಕೃಷಿ ತೋಟದಲ್ಲಿ ಪ್ರವೀಣ್ ಕುಲಾಲ್ ಇವರನ್ನು ಪಂಚವರ್ಣದ ರೈತರೆಡೆಗೆ ನಮ್ಮ ನಡಿಗೆ ಕಾರ್ಯಕ್ರಮದಲ್ಲಿ ವಿಶಿಷ್ಟ ರೀತಿಯಲ್ಲಿ ಆಯೋಜಿಸಲಾಯಿತು.