ಕುಂದಾಪುರ ಮಿರರ್ ಸುದ್ದಿ…
ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಪಣತೊಟ್ಟಿದ್ದು, ಸಮಗ್ರ ಭಿವೃದ್ಧಿಗಾಗಿ ಮುಂದಿನ ದಿನಗಳಲ್ಲಿ 13 ದಿನಗಳ ಸಮೃದ್ಧ ನಡಿಹೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಎಚ್ಚರಿಸಿದ್ದಾರೆ. ಶನಿವಾರ ಬೆಳಿಗ್ಗೆ ಬೈಂದೂರಿನ ಖಾಸಗೀ ಹೋಟೆಲ್ ನಲ್ಲಿ ಕರೆದ ಸುದ್ಧಿಗೋಷ್ಟಿಯಲ್ಲಿ ಅವರು ಮಾತನಾಡಿದರು.
13 ದಿನಗಳ ಸಮೃದ್ಧ ನಡಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಬೈಂದೂರು ವಿಧಾನಸಭಾ ಕ್ಷೇತ್ರದ ಹಳ್ಳಿಗಳಿಗೆ ಲೋಕಸಭಾ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಜೊತೆಗೂಡಿ ನಡಿಗೆ ಆರಂಭಿಸಲಾಗುವುದು. ಪ್ರತೀ ಬೂತ್ ಮಟ್ಟದಲ್ಲಿರುವ ಸಮಸ್ಯೆಗಳನ್ನು ಮನಗಂಡು ಮುಂದಿನ ಅಭಿವೃದ್ಧಿಗೆ ಯೋಜನೆ ರೂಪಿಸಲಾಗುವುದು ಎಂದರು. ಈ ಸಂದರ್ಭದಲ್ಲಿ ಪ್ರತೀ ಹಳ್ಳಿಗಳಿಗೂ ನಡೆದು ಹೋಗಿ ಅಲ್ಲಿನ ಸಮಸ್ಯೆಗಳನ್ನು ಆಲಿಸಲಾಗುತ್ತದೆ. ಪ್ರವಾಸೋದ್ಯ, ಶಿಕ್ಷಣ, ಆರೋಗ್ಯ, ಕೃಷಿ, ಸೇತುವೆಗಳು, ಕುಡಿಯುವ ನೀರು ಹೀಗೇ ಎಲ್ಲಾ ದಿಕ್ಕಿನಲ್ಲಿಯೂ ಬೈಂದೂರನ್ನು ಸಮೃದ್ಧಗೊಳಿಸುವ ಹೋರಾಟಕ್ಕೆ ಎಲ್ಲರ ಸಹಕಾರ ಬೇಕಾಗಿದೆ ಎಂದರು. ಕಾಂಗ್ರೆಸ್ ಪಕ್ಷದ ನಾಯಕರು ಇತ್ತೀಚಿನ ದಿನಗಳಲ್ಲಿ ಬಿಜೆಪಿ ಕಾರ್ಯಕರ್ತರ ತಂಟೆಗೆ ಬರುತ್ತಿದ್ದು, ಇದನ್ನು ಸಹಿಸುವುದಿಲ್ಲ ಎಂದೂ ಇದೇ ಸಂದರ್ಭ ಎಚ್ಚರಿಸಿದರು.
ಈ ಸಂದರ್ಭ ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಚುನಾವಣಾ ಉಸ್ತುವಾರಿ ಭಾನುಪ್ರಕಾಶ್, ಮುಖಂಡರಾದ ಅಶೋಕ ಮೂರ್ತಿ, ಜಿಲ್ಲಾ ಮುಖಂಡ ಸದಾನಂದ ಉಪ್ಪಿನಕುದ್ರು, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ, ಬೈಂದೂರು ಮಂಡಲ ಕಾರ್ಯದರ್ಶಿ ಮಹೇಂದ್ರ ಪೂಜಾರಿ, ಉಮೇಶ್ ಶೆಟ್ಟಿ ಕಲ್ಗದ್ದೆ, ಕೋಶಾಧಿಕಾರಿ ಗಣೇಶ್ ಗಾಣಿಗ, ಬಿಜೆಪಿ ಜಿಲ್ಲಾ ಕೈಗಾರಿಕಾ ಪ್ರಕೋಷ್ಟ ಸಂಚಾಲಕ ಬಿ.ಎಸ್.ಸುರೇಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.