ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಶ್ರೀ ಶನೇಶ್ವರ ದೇವಸ್ಥಾನ ಟ್ರಸ್ಟ್ ಮಾರ್ಗೋಳಿ, ಬಸ್ರೂರು ಇದರ ನೂತನ ಅಧ್ಯಕ್ಷರಾಗಿ ರಾಮ ಮಾರ್ಗೋಳಿ ಆಯ್ಕೆಯಾಗಿದ್ದಾರೆ. ಮಾ.24ರಂದು ಶ್ರೀ ಅನ್ನಪೂರ್ಣೇಶ್ವರಿ ಭವನದಲ್ಲಿ ನಡೆದ 12ನೇ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.
ಮಹಾಸಭೆಯ ಅಧ್ಯಕ್ಷತೆಯನ್ನು ಟ್ರಸ್ಟಿನ ಉಪಾಧ್ಯಕ್ಷರಾದ ವೆಂಕಟೇಶ್ ಕಳಂಜಿ ಅಧ್ಯಕ್ಷತೆ ವಹಿಸಿದ್ದರು. ಮಹಾಸಭೆಯಲ್ಲಿ ಟ್ರಸ್ಟಿನ ಸ್ಥಾಪಕ ಅಧ್ಯಕ್ಷರಾದ ಮಹಾಲಿಂಗ ಮಾರ್ಗೋಳಿ ಅವರು ನಿಧನ ಹೊಂದಿದ್ದು ಅವರ ಆತ್ಮಕ್ಕೆ ಚಿರಶಾಂತಿ ಕೋರಲಾಯಿತು.
ನೂತನ ಜೊತೆ ಕಾರ್ಯದರ್ಶಿಯಾಗಿ ರವಿರಾಜ್ ಮಾರ್ಗೋಳಿ, ಆಂತರಿಕ ಲೆಕ್ಕಪರಿಶೋಧಕರಾಗಿ ಸಂದೀಪ್ ಮಾರ್ಗೋಳಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಟ್ರಸ್ಟಿನ ಕಾನೂನು ಸಲಹೆಗಾರರಾಗಿ ಸುಕೇಶ ಶೆಟ್ಟಿ ನ್ಯಾಯವಾದಿ ಆರೂರು ಇವರನ್ನು ನೇಮಕ ಮಾಡಲಾಯಿತು.
ವೆಂಕಟೇಶ್ ಕಳಂಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ನೂತನ ಅಧ್ಯಕ್ಷನ್ನು ಅಭಿನಂದಿಸಿದರು. ಟ್ರಸ್ಟಿನ ಕೋಶಾಧಿಕಾರಿ ರಂಜಿತ ಲೆಕ್ಕಪತ್ರ ಮಂಡಿಸಿದರು. ಮುಂದಿನ ವರ್ಷದ ಬಜೆಟ್ ಮಂಡಿಸಲಾಯಿತು. 12ನೇ ವರ್ಷದ ಪ್ರತಿಷ್ಠಾ ವರ್ಧಂತಿ ಉತ್ಸವವನ್ನು ಮೇ ತಿಂಗಳಲ್ಲಿ ನಡೆಸಲು ತೀರ್ಮಾನಿಸಲಾಯಿತು. ಕಾರ್ಯದರ್ಶಿ ಗೋವಿಂದ ಮಾರ್ಗೋಳಿ ಸ್ವಾಗತಿಸಿ, ವಂದಿಸಿದರು.