ಕುಂದಾಪುರ ಮಿರರ್ ಸುದ್ದಿ…
ಕೋಟ: ಇಲ್ಲಿನ ಬ್ಲಾಕ್ ಕಾಂಗ್ರೆಸ್ ಹಾಗೂ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಸಾರ್ವಜನಿಕ ಗೂಡುದೀಪ ಸ್ಪರ್ಧೆ ನ.3ರಂದು ಹಮ್ಮಿಕೊಂಡಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸ್ವದೇಶಿ ಗೂಡು ದೀಪ ರಚಿಸಿ ಸ್ಪರ್ಧೆಗೆ ಭಾಗವಹಿಸಬೇಕು ಎಂದು ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ್ ಕುಂದರ್ ಹೇಳಿದರು.
ಅವರು ಭಾನುವಾರ ಕೋಟ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ ಹಲವು ವರ್ಷಗಳಿಂದ ದೀಪಾವಳಿಯ ಹಬ್ಬದ ಪ್ರಯುಕ್ತ ಗೋಪುಜೆಯನ್ನು ಕೋಟ ಬ್ಲಾಕ್ ಕಾಂಗ್ರೆಸ್ ಸಂಘಟಿಸುತ್ತಿದ್ದು, ಈ ಬಾರಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಹಯೋಗದಲ್ಲಿ ಗೂಡುದೀಪ ಸ್ಪರ್ಧೆ ಸಂಘಟಿಸಿದ್ದೇವೆ. ಪ್ರಥಮ ರೂ.8 ಸಾವಿರ, ದ್ವಿತೀಯ ರೂ.5ಸಾವಿರ, ತೃತೀಯ ರೂ. ಎರಡುವರೆ ಸಾವಿರ ನೀಡಲಾಗುತ್ತಿದ್ದು, 3 ಸಮಾಧಾಕರ ಬಹುಮಾನವಿದೆ.ಜತೆಗೆ ಗೌರವ ಸ್ಮರಣಿಕೆ ವಿಜೇತರಿಗೆ ನೀಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಕಿಶನ್ ಹೆಗ್ಡೆ,ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಟರಾಜ್ ಹೊಳ್ಳ,ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಸದಸ್ಯರಾದ ಶ್ರೀನಿವಾಸ ಅಮೀನ್,ರವೀಂದ್ರ ಕಾಮತ್,ಸದಾನಂದ ತೆಕ್ಕಟ್ಟೆ,ರಕ್ಷಿತ್ ಪೂಜಾರಿ,ಶಂಕರ್ ಬಂಗೇರ,ಗಣೇಶ್ ನೆಲ್ಲಿಬೆಟ್ಟು,ರವಿ ಪೂಜಾರಿ,ದಿನೇಶ್ ಬಂಗೇರ,ಆನಂದ ಗಾಣಿಗ ಮೊದಲಾದವರು ಉಪಸ್ಥಿತರಿದ್ದರು.
ಗೂಡುದೀಪದ ಪೋಸ್ಟರ್ ಬಿಡುಗಡೆ
ಕೋಟ ಬ್ಲಾಕ್ ಕಾಂಗ್ರೆಸ್, ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಸಾರ್ವಜನಿಕ ಗೂಡುದೀಪ ಸ್ಪರ್ಧೆಯ ಪೋಸ್ಟರ್‍ರನ್ನು ಇದೇ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಕಿಶನ್ ಹೆಗ್ಡೆ ಬಿಡುಗಡೆಗೊಳಿಸಿದರು.ಸಮಾರಂಭದ ಅಧ್ಯಕ್ಷತೆಯನ್ನು ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ್ ಕುಂದರ್ ವಹಿಸಿದ್ದರು.