ಕುಂದಾಪುರ: ಸ್ವಿಮ್ಮಿಂಗ್ ಪೂಲ್ ನೀರಿನಲ್ಲಿ ಮುಳುಗಿ ಬಾಲಕ ಮೃತ್ಯು

0
178

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಕುಂದಾಪುರ ತಾಲೂಕಿನ ಹೆಂಗವಳ್ಳಿ ಸಮೀಪದ ಖಾಸಗಿ ರೆಸಾರ್ಟ್ ಗೆ ಕುಟುಂಬ ಸದಸ್ಯರೊಂದಿಗೆ ಪ್ರವಾಸಕ್ಕೆ ತೆರಳಿದ್ದ ನಾಲ್ಕನೇ ತರಗತಿಯ ವಿದ್ಯಾರ್ಥಿಯೋರ್ವ ಈಜುಕೊಳದ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.

Click Here

ಹೊಡೆ ಮೂಲದ ಮುಹಮ್ಮದ್ ಅರೀಝ್ (10) ಮೃತ ವಿದ್ಯಾರ್ಥಿ. ಈತ ಹೂಡೆಯ ದಾರುಸ್ಸಲಾಮ್ ಇಂಗ್ಲಿಷ್‌ ಮೀಡಿಯಂ ಶಾಲೆಯ ವಿದ್ಯಾರ್ಥಿ, ಗುರುವಾರ ಮನೆ ಮಂದಿಯೊಂದಿಗೆ ಖಾಸಗಿ ರೆಸಾರ್ಟ್ ಗೆ ಹೋಗಿದ್ದ ಸಂದರ್ಭದಲ್ಲಿ ಸ್ವಿಮಿಂಗ್ ಫುಲ್’ನ ನೀರಿಗೆ ಬಿದ್ದು ಚಿಂತಾಜನಕ ಸ್ಥಿತಿಯಲ್ಲಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಆತ ಕೊನೆಯುಸಿರೆಳೆದಿದ್ದಾನೆ. ಲೈಫ್ ಜಾಕೆಟ್, ಲೈಫ್ ಗಾರ್ಡ್ ಇನ್ನಿತರ ಸೂಕ್ತ ವ್ಯವಸ್ಥೆ ಇಲ್ಲದ ಕಾರಣ ಈ ದುರ್ಘಟನೆ ಸಂಭವಿಸಿದೆಯೆಂದು ದೂರಿನಲ್ಲಿ ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here