ಕುಂದಾಪುರ :ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ‘ವಿ-ಗ್ರೋ’ ಬ್ಯುಸಿನೆಸ್ ಡೇ: ವ್ಯವಹಾರ ಮೇಳ

0
538

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ : ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗವು ಆಯೋಜಿಸಿರುವ ‘ವಿ-ಗ್ರೋ ಬ್ಯುಸಿನೆಸ್ ಡೇ’ ಮೂರು ಹಂತದಲ್ಲಿ ಆಯೋಜನೆಗೊಂಡು, ಈ ವಿನೂತನ ಕಾರ್ಯಕ್ರಮದ ಮೊದಲ ಹಂತದದಲ್ಲಿ ವಿದ್ಯಾರ್ಥಿಗಳು ತಮ್ಮಲ್ಲಿರುವ ಹೊಸ-ಹೊಸ ವ್ಯವಹಾರಿಕ ಜ್ಞಾನವನ್ನು ಪ್ರಸ್ತುತ ಪಡಿಸಿದ್ದು, ಎರಡನೇ ಹಂತದಲ್ಲಿ ತಾವೇ ತಯಾರಿಸಿದ ಉತ್ಪನ್ನದೊಂದಿಗೆ ಬೇರೆ ಬೇರೆ ವಸ್ತುಗಳ ಮಳಿಗೆಯನ್ನಿಟ್ಟು, ವ್ಯವಹಾರ ಮೇಳವನ್ನು ಸೃಷ್ಟಿಸಿ, ವಿದ್ಯಾರ್ಥಿಗಳಿಗೆ ವಾಣಿಜ್ಯ ಸಂಬಂಧಿ ವಿಷಯಗಳನ್ನು ಪ್ರಾಯೋಗಿಕವಾಗಿ ತಿಳಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ನಡೆದಿದೆ.

ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಕಾರ್ಯದರ್ಶಿ ಸೀತಾರಾಮ್ ನಕ್ಕತ್ತಾಯ ಕಾರ್ಯಕ್ರಮವನ್ನು ಉದ್ಘಾಟಿಸಿ, ಅಧ್ಯಕ್ಷತೆಯನ್ನು ವಹಿಸಿದರು.

Click Here

Click Here

ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೇಷ್ಟ ನ್ಯೂಟ್ರಿಷಿಯನ್ಸ್ ಪ್ರೈವೆಟ್ ಲಿಮಿಟೆಡ್, ಬೆಂಗಳೂರು ಇದರ ವ್ಯವಸ್ಥಾಪಕ ನಿರ್ದೇಶಕರಾದ ಸುನೀಲ್ ಕೆ. ಶೆಟ್ಟಿ ಮಾತನಾಡಿ ಗೆಲುವು ಸುಲಭದ ಸಾಧನವಲ್ಲ, ಅದಕ್ಕೆ ನಿರಂತರ ಪ್ರಯತ್ನ ಅತ್ಯಗತ್ಯ. ಕೆಲವೊಂದು ಸಂದರ್ಭದಲ್ಲಿ ಪ್ರಯತ್ನಗಳು ಸೋಲಬಹುದು ಆದರೆ ನಿಮ್ಮ ಪ್ರಯತ್ನ ಗೆಲುವಿನೆಡೆಗೆ ನಿರಂತರವಾಗಿರಬೇಕು ಎಂದರು.

ಉಡುಪಿಯ ಮಹಿಳಾ ಉದ್ಯಮಿಯಾದ ಸ್ವಪ್ನಾ ಸುರೇಶ್ ವ್ಯವಹಾರ ಕೌಶಲ್ಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಸವಿಸ್ತಾರವಾಗಿ ಮನದಟ್ಟು ಮಾಡಿದರು. ಅಂ-ಲೆಕ್ಕ ಪರಿಶೋದಕ ಪರೀಕ್ಷೆಯಲ್ಲಿ ತೇರ್ಗಡೆಯಾದ ಪ್ರಾಕ್ತನ ವಿದ್ಯಾರ್ಥಿ ರಕ್ಷಿತ್ ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಶುಭಶಂಸನೆ ಮಾತುಗಳನ್ನಾಡಿದರು.

ಉಪಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಾಣಿಜ್ಯ ಉಪನ್ಯಾಸಕರಾದ ಸುಧೀರ್ ಕುಮಾರ್ ಸ್ವಾಗತಿಸಿದರು.

ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಪ್ರೀತಿ ಹೆಗ್ಡೆ ಮತ್ತು ಪೂಜಾ ಕುಂದರ್ ಅತಿಥಿಗಳನ್ನು ಪರಿಚಯಿಸಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ವೀಣಾ ವಿ. ಭಟ್ ವಂದಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಸತೀಶ್ ಶೆಟ್ಟಿ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.

Click Here

LEAVE A REPLY

Please enter your comment!
Please enter your name here