ಕೋಟ :ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಮತದಾನ

0
269

ಕುಂದಾಪುರ ಮಿರರ್ ಸುದ್ದಿ…

Click Here

Click Here

ಕುಂದಾಪುರ: ಲೋಕಸಭಾ ಸಭಾ ಚುನಾವಣೆಯ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ‌ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ತಮ್ಮ ಮತ ಕ್ಷೇತ್ರವಾದ ಕೋಟದ ದಲ್ಲಿರುವ ಕೋಟತಟ್ಟು ಗ್ರಾಮ ಪಂಚಾಯತ್ ನ ಮತಗಟ್ಟೆ ಸಂಖ್ಯೆ 165 ರಲ್ಲಿ ಬೆಳಿಗ್ಗೆ 7.30 ಗಂಟೆಗೆ ಮತದಾನ ಮಾಡಿದರು.

ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದ ಕೋಟ ಶ್ರೀನಿವಾಸ ಪೂಜಾರಿ, ಪತ್ನಿ ಶಾಂತ ಹಾಗೂ ಪುತ್ರಿ ಶೃತಿ ಅವರೊಂದಿಗೆ ಮತಗಟ್ಟೆಗೆ ಬಂದು ಮತದಾನ ಮಾಡಿದರು. ಈ ಸಂದರ್ಭ ಮಾತನಾಡಿದ ಅವರು, ಕ್ಷೇತ್ರದ ಜನತೆ ರಾಷ್ಟ್ರೀಯ ಐಕ್ಯತೆ ಮತ್ತು ಭದ್ರತೆಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಬೆಂಬಲಿಸುತ್ತಾರೆ ಆ ನಿಟ್ಟಿನಲ್ಲಿ ಅತ್ಯಂತ ಅಧಿಕ ಸಂಖ್ಯೆಯಲ್ಲಿ ಮತದಾರರು ನನ್ನ ಕೈ ಹಿಡಿಯುತ್ತಾರೆ ಎನ್ನುವ ಭರವಸೆ ಇದೆ ಎಂದರು.

Click Here

LEAVE A REPLY

Please enter your comment!
Please enter your name here