ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ : 2024-25 ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆಯು ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಜರುಗಿತು.
ಸಂಸ್ಥೆಯ ಕಾರ್ಯದರ್ಶಿ ಶ್ರೀ ಕೆ. ರಾಧಾಕೃಷ್ಣ ಶೆಣೈ ಅಧ್ಯಕ್ಷತೆಯನ್ನು ವಹಿಸಿದ್ದರು.
ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ ಅವರು ಶೈಕ್ಷಣಿಕ ಕಾರ್ಯ ಯೋಜನೆಗಳ ಕುರಿತು ಮಾಹಿತಿ ನೀಡಿ, ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ತಮ್ಮ ಗುರಿಯನ್ನು ಸಾಧಿಸಲು ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಪ್ರಯತ್ನದ ಜೊತೆಗೆ ಹೆತ್ತವರ ಪ್ರಯತ್ನ ಅತ್ಯಗತ್ಯ ಎಂದರು.
ವೇದಿಕೆಯಲ್ಲಿ ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ಹಿರಿಯ ರಸಾಯನ ಶಾಸ್ತ್ರ ಉಪನ್ಯಾಸಕ ರಮಾಕಾಂತ್ ರೇವಣಕರ್ ಉಪಸ್ಥಿತರಿದ್ದರು.