ಬೈಂದೂರು :ಮೇ 1ರಂದು ಕಿರಿಮಂಜೇಶ್ವರದಲ್ಲಿ ವಿಜಯ ಸಂಕಲ್ಪ ಬೃಹತ್ ಸಮಾವೇಶ

0
449

ಕುಂದಾಪುರ ಮಿರರ್ ಸುದ್ದಿ…

ಬೈಂದೂರು :ರಾಷ್ಟ್ರಭಕ್ತರ ಬಳಗದ ವತಿಯಿಂದ ಮೇ ೧ ಬುಧವಾರ ಬೆಳಿಗ್ಗೆ 10:30ಕ್ಕೆ ಕಿರಿಮಂಜೇಶ್ವರದಲ್ಲಿ ವಿಜಯ ಸಂಕಲ್ಪ ಸಮಾವೇಶವನ್ನು ಆಯೋಜಿಸಲಾಗಿದೆ. ಈ ಸಮಾವೇಶದಲ್ಲಿ ಸುಮಾರು ೧೦ಸಾವಿರಕ್ಕೂ ಮಿಕ್ಕಿ ಜನ ಸೇರುವ ನಿರೀಕ್ಷೆ ಹೊಂದಲಾಗಿದೆ ಎಂದು ರಾಷ್ಟ್ರಭಕ್ತರ ಬಳಗದ ಕೃಷ್ಣ ಬಿಜೂರು ಹೇಳಿದರು.

ಅವರು ಸೋಮವಾರ ಉಪ್ಪುಂದದ ರಾಷ್ಟ್ರಭಕ್ತರ ಬಳಗದ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ವಿಜಯ ಸಂಕಲ್ಪ ಸಮಾವೇಶದಲ್ಲಿ ಮೀನುಗಾರರು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್ ಈಶ್ವರಪ್ಪ ಅವರನ್ನು ಸನ್ಮಾನಿಸಲಿದ್ದಾರೆ. ರಾಷ್ಟ್ರಭಕ್ತರ ಬಳಗದ ವತಿಯಿಂದ ೧೦ ಮಂದಿ ಪೌರ ಕಾರ್ಮಿಕರನ್ನು ಸನ್ಮಾನಿಸಲಾಗುವುದು. ಮುಳುಗುತಜ್ಞ ದಿನೇಶ ಖಾರ್ವಿ ಗಂಗೊಳ್ಳಿ ಅವರನ್ನು ಸನ್ಮಾನಿಸಲಾಗುವುದು ಎಂದು ಅವರು ಹೇಳಿದರು.

Click Here

ಶ್ರೀಧರ ಬಿಜೂರು ಬೆಂಬಲ ಹಿಂಪೆಡೆದ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಅವರು ಏಕೆ ಹೇಳಿದರು, ಅವರ ಉದ್ದೇಶ ಎನು ಅಂತ ನಮಗೆ ಗೊತ್ತಿಲ್ಲ. ಅದು ಅವರ ವೈಯಕ್ತಿಕ ವಿಚಾರ. ನಾವೆಲ್ಲಾ ನೈಜ ಹಿಂದುತ್ವವಾದಿಗಳು. ಕೆ.ಎಸ್ ಈಶ್ವರಪ್ಪನವರು ಹೇಳಿದಂತೆ ನರೇಂದ್ರ ಮೋದಿಯವರ ಪ್ರತಿಯೊಂದು ಕಾರ್ಯವನ್ನು ಮೆಚ್ಚಿಕೊಂಡು ಅವರನ್ನು ಬೆಂಬಲಿಸುತ್ತಿದ್ದೇವೆ. ನಾವು ಸಾಮಾನ್ಯ ಕಾರ್ಯಕರ್ತರು, ನಾವು ಮುನ್ನೆಡಿಸಿಕೊಂಡು ಹೋಗುತ್ತೇವೆ ಎಂದರು.

ಈಗಾಗಲೇ ನಾವು ೨೦೦ ಬೂತ್‌ಗಳಲ್ಲಿ ಚುನಾವಣಾ ಪ್ರಚಾರ ಕಾರ್ಯ ಮಾಡಿದ್ದೇವೆ. ಕ್ಷೇತ್ರದಲ್ಲಿ ಹಿಂದುತ್ವದ ಅಲೆಯೇ ಎದ್ದಿದೆ. ಉತ್ತಮ ಪ್ರತಿಕ್ರಿಯೆ ಕಂಡು ಬರುತ್ತಿದೆ ಎಂದರು.

ಸುದ್ಧಿಗೋಷ್ಠಿಯಲ್ಲಿ ವಿನೋದ್ ರಾಜ್, ಉಮೇಶ ಬಿಜೂರು, ಮೋಹನ್, ಜಗದೀಶ ಉಪಸ್ಥಿತರಿದ್ದರು.

Click Here

LEAVE A REPLY

Please enter your comment!
Please enter your name here