ಕುಂದಾಪುರ ಮಿರರ್ ಸುದ್ದಿ…
ಬೈಂದೂರು : ಈ ದೇಶದ ಜನರ ಮೂಲಭೂತ ಸಮಸ್ಯೆಗಳ ಬಗ್ಗೆ ಮಾತನಾಡಬೇಕಾದ ಈ ದೇಶದ ಪ್ರಧಾನಿ ಸಮಸ್ಯೆಗಳ ಕುರಿತು ಮೌನವಹಿಸುತ್ತಾರೆ ಆದರೆ ಜಾತಿ ಜಾತಿಗಳ ನಡುವೆ ಧರ್ಮ ಧರ್ಮಗಳ ನಡುವೆ ಸಂಘರ್ಷ ಸೃಷ್ಟಿಸಿ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ವಕ್ತಾರ ನಿಕೇತ್ ರಾಜ್ ಮೌರ್ಯ ಆರೋಪಿಸಿದ್ದಾರೆ.
ಅವರು ಮಂಗಳವಾರ ಕಿರಿಮಂಜೇಶ್ವರದಲ್ಲಿ ಬೈಂದೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಶಿವಮೋಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರ ಪರ ಆಯೋಜಿಸಲಾದ್ದ ಮಹಿಳಾ ಸಮಾವೇಶ ಉದ್ದೇಶಿಸಿ ಮಾತನಾಡಿದರು.
ಹಿಂದುತ್ವ ಮಸೀದಿ, ಅಜಾನ್, ಹಿಜಾಬ್, ಹಲಾಲ್ ಕಟ್, ಮಾಂಸ, ಜಗಳ ಇಂತಹವನ್ನೇ ದೊಡ್ಡದು ಮಾಡುವ ಬಿಜೆಪಿ ಬೇಕೋ? ಅಥವಾ ಶಿಕ್ಷಣ, ಆರೋಗ್ಯ, ಉದ್ಯೋಗ, ಅಭಿವೃದ್ಧಿಗಳ ಬಗ್ಗೆ ಚಿಂತಿಸಿ ಕಾರ್ಯರೂಪಕ್ಕೆ ತರುವ ಕಾಂಗ್ರೆಸ್ ಸರ್ಕಾರ ಬೇಕೋ ಎಂಬುವುದನ್ನು ಮತದಾರರು ಅರ್ಥ ಮಾಡಿಕೊಳ್ಳಬೇಕಿದೆ. ಆ ಮೂಲಕ ಈ ಬಾರಿ ಶಿವಮೊಗ್ಗಬಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ಸನ್ನು ಗೆಲ್ಲಿಸಬೇಕಿದೆ. ಕಾಂಗ್ರೆಸ್ ಗೆದ್ದರೆ ಅದು ಸತ್ಯ ಮತ್ತು ಧರ್ಮದ ಗೆಲುವಾಗಲಿದೆ. ಸತ್ಯ,ನ್ಯಾಯ, ಸಮಾನತೆ, ಭ್ರಾತೃತ್ವದ ಹರಿಕಾರ ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನವನ್ನೇ ಬದಲಿಸಲು ಹೊರಟಿರುವ ಬಿಜೆಪಿಯನ್ನು ತಿರಸ್ಕರಿಸಿ ಜನರ ಬದುಕು ಕಟ್ಟಿದ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಎಂದರು.
ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ ಕುಮಾರ್ ಮಾತನಾಡಿ, ದೇಶದಲ್ಲಿ ಮಹಿಳೆಯರಿಗೆ ಮೊದಲ ಭಾರಿಗೆ ಮೀಸಲಾತಿ ನೀಡಿ ಧ್ವನಿ ನೀಡಿದ್ದು, ದೇಶದ ಜನರ ಬದುಕು ಕಟ್ಟಿದ ಕಾಂಗ್ರೆಸ್ ಪಕ್ಷ. ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರೆಂಟಿ ಕಾರ್ಡ್ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ. ದೇಶದಲ್ಲಿ ಐಎನ್‌ಡಿಐಎ ಅಧಿಕಾರಕ್ಕೆ ಬಂದರೆ ದೇಶದಲ್ಲಿಯೂ ಕಾಂಗ್ರೆಸ್ ಗ್ಯಾರೆಂಟ್ ಅನುಷ್ಠಾನಕ್ಕೆ ಬರಲಿದೆ ಎಂದರು.
ನಟ ದುನಿಯಾ ವಿಜಿ ಮಾತನಾಡಿ, ಬಿಜೆಪಿ ದೇಶದಲ್ಲಿ ಹಿಂದೂ ಮುಸ್ಲಿಂ ಎಂದು ನಮ್ಮಲ್ಲಿಯೇ ಒಡಕು ತಂದು ಬೇಳೆ ಬೆಯಿಸಿಕೊಳ್ಳುತ್ತಿದ್ದಾರೆ. ನಾವು ಒಗ್ಗಟ್ಟಾಗಿ ಕಾಂಗ್ರೆಸ್ ಬೆಂಬಲಿಸುವುದು ಬಹುಮುಖ್ಯವಾಗಿದೆ ಎಂದರು.
ಶೃಂಗೇರಿ ಶಾಸಕ ರಾಜೇಗೌಡ, ಬೈಂದೂರು ಮಾಜಿ ಶಾಸಕರುಗಳಾದ ಕೆ. ಗೋಪಾಲ ಪೂಜಾರಿ, ಬಿ. ಎಂ. ಸುಕುಮಾರ ಶೆಟ್ಟಿ, ಮೂಡಿಗೆರೆ ಮಾಜಿ ಶಾಸಕ ನಿಂಗಯ್ಯ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಜಿಲ್ಲಾ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾಂಗ್ರೆಸ್ ಮುಖಂಡರುಗಳಾದ ಕೆ. ಜಯಪ್ರಕಾಶ್ ಹೆಗ್ಡೆ, ಮುನಿಯಲ್ ಉದಯಕುಮಾರ್ ಶೆಟ್ಟಿ, ಎಸ್. ರಾಜು ಪೂಜಾರಿ, ರಘುರಾಮ ಶೆಟ್ಟಿ, ಬೈಂದೂರು ಕ್ಷೇತ್ರದ ಉಸ್ತುವಾರಿ ಜಿ.ಎ. ಭಾವ, ಮಾಧ್ಯಮ ವಕ್ತಾರ ಅನಿಲ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೌರಿ ದೇವಾಡಿಗ, ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೌರಿ ದೇವಾಡಿಗ, ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೌರಿ ದೇವಾಡಿಗ, ಜಗದೀಶ ದೇವಾಡಿಗ, ಸುಬ್ರಹ್ಮಣ್ಯ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು. ಡಾ. ಸುಬ್ರಹ್ಮಣ್ಯ ಭಟ್ ಕಾರ್ಯಕ್ರಮ ನಿರೂಪಿಸಿದರು.