ವಿಧಾನಪರಿಷತ್ ಚುನಾವಣೆ : ಜೂನ್ 1 ರಿಂದ 3ರ ವರೆಗೆ ಮದ್ಯ ಮಾರಾಟ ನಿಷೇಧ

0
313

ಕುಂದಾಪುರ ಮಿರರ್ ಸುದ್ದಿ…

Click Here

ಉಡುಪಿ : ಕರ್ನಾಟಕ ವಿಧಾನಪರಿಷತ್ತಿಗೆ ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಮತ್ತು ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಗಳ ಚುನಾವಣೆ-2024 ಕ್ಕೆ ಸಂಬಂಧಿಸಿದಂತೆ ಜೂನ್ 3 ರಂದು ಮತದಾನ ನಡೆಯಲಿದ್ದು, ಈ ಸಂದರ್ಭದಲ್ಲಿ ಶಾಂತಿಪಾಲನೆ, ಕಾನೂನು ಸುವ್ಯವಸ್ಥೆ ಮತ್ತು ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಕಾರ್ಯಗಳು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ಕರ್ನಾಟಕ ಅಬಕಾರಿ ಕಾಯ್ದೆ ಸಾಮಾನ್ಯ ನಿಯಮಾವಳಿ 1967 ಕಲಂ 10(ಬಿ) ರಂತೆ ಹಾಗೂ ಪ್ರಜಾ ಪ್ರಾತಿನಿಧ್ಯ ಕಾಯ್ದೆ 1951 ರ ಕಲಂ 135 (ಸಿ) ಪ್ರಕಾರ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಜಿಲ್ಲೆಯಾದ್ಯಂತ ಜೂನ್ 1 ರಂದು ಸಂಜೆ 5 ಗಂಟೆಯಿಂದ ಜೂನ್ 3 ರ ಮಧ್ಯರಾತ್ರಿ 12 ರ ವರೆಗೆ ಎಲ್ಲಾ ರೀತಿಯ ಮದ್ಯದಂಗಡಿ, ಮದ್ಯಮಾರಾಟ ಡಿಪೋ, ಮದ್ಯ ತಯಾರಿಕಾ ಡಿಸ್ಟಲರಿ, ಸ್ಟಾರ್ ಹೋಟೆಲ್‌ಗಳಲ್ಲಿ, ಶೇಂದಿ ಅಂಗಡಿ ಹಾಗೂ ಕ್ಲಬ್‌ಗಳಲ್ಲಿ ಮದ್ಯ ಮಾರಾಟ ಹಾಗೂ ಸರಬರಾಜು ಮಾಡುವುದನ್ನು ನಿಷೇಧಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.

Click Here

LEAVE A REPLY

Please enter your comment!
Please enter your name here