ಕುಂದಾಪುರ ಮಿರರ್ ಸುದ್ದಿ…
ಕೋಟ: ಕೋಟತಟ್ಟು ಗ್ರಾ. ಪಂ. ವ್ಯಾಪ್ತಿಯ ಗೊಬ್ಬರಬೆಟ್ಟು ನಿವಾಸಿ ಅಕ್ಷಯ್ (32) ಇವರು ಮೇ. 21 ರಿಂದ ಕಾಣೆಯಾಗಿರುವ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಅಕ್ಷಯರವರು ಕೋಟದ ಖಾಸಗಿ ಮೀನು ಸಂಸ್ಕರಣಾ ಘಟಕದಲ್ಲಿ ಕೆಲಸ ನಿರ್ವಹಿಸುತ್ತಿದ್ದು ಮೇ. 21ರಂದು ರಜೆ ಮಾಡಿ ಬೆಳಿಗ್ಗೆ 11 ಗಂಟೆಗೆ ಮನೆಯಿಂದ ಹೋದವರು ಮಧ್ಯಾಹ್ನ 1 ಗಂಟೆಗೆ ಅವರ ಪತ್ನಿಗೆ ಕೋಟದಲ್ಲಿ ಕಾಣಸಿಕ್ಕಿದ್ದು ಸ್ವಲ್ಪ ಕೆಲಸ ಇದೆ ಆಮೇಲೆ ಬರುತ್ತೇನೆ ಎಂದು ಹೇಳಿ ಹೋದವರು ಈ ವರೆಗೂ ಸಹ ಮನೆಗೆ ಬಾರದೇ ಇರುವುದರಿಂದ ಎಲ್ಲಾ ಭಾಗಗಳಲ್ಲಿ ಹುಡುಕಾಡಿದರೂ ಪತ್ತೆಯಾಗಿರುವುದಿಲ್ಲ.
ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬುಧವಾರ ಮೊಬೈಲ್ ಪತ್ತೆ: ಪೊಲೀಸರು ಅಕ್ಷಯ್ ಅವರ ಮೊಬೈಲ್ ಟವರ್ ಲೊಕೇಶನ್ ಪರಿಶೀಲಿಸಿದಾಗ ಕುಂದಾಪುರ ತಾಲೂಕಿನ ಕೊರವಡಿ ಬಳಿ ತೋರಿಸಿದ್ದು ಹಾಗೆ ಪೊಲೀಸರು ಹುಡುಕಾಡಿದಾಗ ಕೊರವಡಿ ಬಳಿ ಮುಳ್ಳಿನ ಪೊದೆಯಲ್ಲಿ ಮೊಬೈಲ್ ಪತ್ತೆಯಾಗಿದೆ. ಕೋಟ ಪೊಲೀಸರು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಈ ವ್ಯಕ್ತಿ ಕಂಡು ಬಂದಲ್ಲಿ ಈ ಕೆಳಗಿನ ಮೊಬೈಲ್ ನಂಬರ್ ಗೆ ತಿಳಿಸಬೇಕಾಗಿ ವಿನಂತಿಸಲಾಗಿದೆ. 9686184490, 9964143822