ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಸರ್ಕಾರಿ ಪ್ರೌಢ ಶಾಲೆ ಕಾಳಾವರ ಇಲ್ಲಿನ ಶಾಲಾ ಪ್ರಾರಂಭೋತ್ಸವಕ್ಕೆ ಶಿಕ್ಷಕ ವೃಂದದವರು ಸಾಕಷ್ಟು ತಯಾರಿ ನಡೆಸಿದ್ದರು. ತೋರಣ ಕಟ್ಟಿ, ಹೂವಿನೊಂದಿಗೆ ಶಾಲೆಯನ್ನು ಶೃಂಗರಿಸಿದ್ದರು. 8ನೆಯ ತರಗತಿಗೆ ಹೊಸದಾಗಿ ದಾಖಲಾದ ವಿದ್ಯಾರ್ಥಿಗಳನ್ನು ವಿಶೇಷ ಮೆರವಣಿಗೆಯಲ್ಲಿ ಶಾಲೆಗೆ ಬರಮಾಡಿಕೊಂಡು ಪುಷ್ಪ ವೃಷ್ಟಿಯೊಂದಿಗೆ ಸ್ವಾಗತಿಸಲಾಯಿತು.
ನಂತರ ನಡೆದ ಸರಳ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ ವಿತರಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷರಾದ ರಮೇಶ್ ಆಚಾರ್ಯ ವಹಿಸಿದ್ದರು , ಮುಖ್ಯ ಅತಿಥಿಗಳಾಗಿ ಸದಸ್ಯಸತೀಶ್ ಜೋಗಿ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಿಸಿದರು. ಮುಖ್ಯೋಪಾಧ್ಯಾಯಿನಿ ಗಾಯತ್ರಿ ಅಡಿಗ ಸರ್ವರನ್ನು ಸ್ವಾಗತಿಸಿ , ವಿದ್ಯಾರ್ಥಿಗಳಿಗೆ ಶೈಕ್ಷಣಿಕ ತಯಾರಿಯ ಕುರಿತು ಮಾಹಿತಿ ನೀಡಿದರು. ಶಿಕ್ಷಕ ಗಣೇಶ್ ಶೆಟ್ಟಿಗಾರ್ ವಂದಿಸಿದರು, ರವಿರಾಜ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.