ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಪ್ರಸಕ್ತ ಶೈಕ್ಷಣಿಕ ವರ್ಷದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆಯು ಜೂನ್ 01 ರಂದು ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಜರುಗಿತು.
ಸಭೆಯ ಅಧ್ಯಕ್ಷತೆಯನ್ನು ಸಂಸ್ಥೆಯ ಕಾರ್ಯದರ್ಶಿ ಕೆ ರಾಧಾಕೃಷ್ಣ ಶೆಣೈ ಅವರು ವಹಿಸಿದ್ದರು.
ಖ್ಯಾತ ವಾಗ್ಮಿ ಹಾಗೂ ನಿರೂಪಕರಾದ ದಾಮೋದರ ಶರ್ಮ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ,
ಹೆತ್ತವರು ತಮ್ಮ ಮಕ್ಕಳಿಗೆ ಸದ್ವಿಚಾರ, ಸಂಸ್ಕೃತಿ, ಮೌಲ್ಯಗಳನ್ನು ಬೆಳೆಸುವ ನಿಟ್ಟಿನಲ್ಲಿ ಯಾವ ರೀತಿ ಕಾರ್ಯ ಪ್ರವೃತ್ತರಾಗಬೇಕು ಎನ್ನುವುದರ ಕುರಿತು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ 2023- 24 ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯ ಮಟ್ಟದ ರ್ಯಾಂಕ್ ವಿಜೇತ 16 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ ಪ್ರಸಕ್ತ ಶೈಕ್ಷಣಿಕ ಸಾಲಿನ ಕಾರ್ಯಯೋಜನೆಗಳ ಕುರಿತು ಮಾಹಿತಿ ನೀಡಿ, ಶೈಕ್ಷಣಿಕ ಪ್ರಗತಿಗೆ ಪೋಷಕರೂ ಉಪನ್ಯಾಸಕರ ಜೊತೆ ಸಹಕರಿಸಬೇಕೆಂದು ಸಲಹೆ ನೀಡಿದರು.
ಉಪಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ಹಿರಿಯ ರಸಾಯನ ಶಾಸ್ತ್ರ ಉಪನ್ಯಾಸಕ ರಮಾಕಾಂತ್ ರೇವಣಕರ್ , ಶ್ರೀ ವೆಂಕಟರಮಣ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗ, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ರೇಷ್ಮಾ ಡಿಸೋಜಾ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಡಿಸೋಜಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸನ್ಮಾನಿತರ ಪಟ್ಟಿಯನ್ನು ಭೌತ ಶಾಸ್ತ್ರ ಉಪನ್ಯಾಸಕ ಗಣೇಶ್ ವಾಚಿಸಿದರು, ಇಂಗ್ಲೀಷ್ ಭಾಷಾ ಉಪನ್ಯಾಸಕಿ ಅಮೃತಾ ಅತಿಥಿಗಳನ್ನು ಪರಿಚಯಿಸಿದರು.
ಉಪಪ್ರಾಂಶುಪಾಲರಾದ ಸುಜಯ್ ಕೋಟೆಗಾರ್ ಸ್ವಾಗತಿಸಿದರು. ರಸಾಯನ ಶಾಸ್ತ್ರ ಉಪನ್ಯಾಸಕಿ ಅನುಷಾ ವಂದಿಸಿದರು. ಕನ್ನಡ ಭಾಷಾ ಉಪನ್ಯಾಸಕಿ ಸುನೀತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು