ಕುಂದಾಪುರ :ಉತ್ತರಾಖಂಡ ಚಾರಣ – ಕುಂದಾಪುರ ಮೂಲದ ಚಾರಣಿಗ ಸಾವು

0
173

ಕುಂದಾಪುರ ಮಿರರ್ ಸುದ್ದಿ…

ಕುಂಭಾಶಿ :ಉತ್ತರಾಖಂಡದ ಸಹಸ್ತ್ರ ತಾಲ್ ಶಿಖರಕ್ಕೆ ಚಾರಣಕ್ಕೆ ತೆರಳಿ ಹವಾಮಾನ ವೈಪರಿತ್ಯದಿಂದ ಕುಂದಾಪುರ ಮೂಲದ ಓರ್ವ ವ್ಯಕ್ತಿಯೂ ಮೃತಪಟ್ಟಿದ್ದಾರೆ. ಕುಂದಾಪುರ ತಾಲೂಕಿನ ಕುಂಭಾಶಿ ಮೂಲದ ಪದ್ಮನಾಭ ಭಟ್ ಮೃತಪಟ್ಟವರು.

ಚಾರಣಕ್ಕೆ ತೆರಳಿದ್ದ 22 ಜನರ ತಂಡದಲ್ಲಿ ಪದ್ಮನಾಭ ಭಟ್ ಕೂಡ ಇದ್ದರು. ಪದ್ಮನಾಭ ಭಟ್ ಅವರು ಮೂಲತಃ ಕುಂಭಾಶಿಯವರು. ಆದರೆ, ಇವರು ಬೆಂಗಳೂರಿನಲ್ಲಿ ವಾಸವಾಗಿದ್ದರು. ಮೇ 29ರಂದು 22 ಜನರ ತಂಡದೊಂದಿಗೆ ಉತ್ತರಕಾಶಿಯ ಸಹಸ್ತ್ರ ತಾಲ್‍ಗೆ ಚಾರಣಕ್ಕೆ ತೆರಳಿದ್ದರು. ಚಾರಣ ಮುಗಿಸಿ ಕೆಳಗೆ ಬರುವಾಗ ಹವಾಮಾನ ವೈಪರಿತ್ಯದಿಂದ ದುರ್ಘಟನೆ ಸಂಭವಿಸಿದೆ.

Click Here

ದುರ್ಘಟನೆಯಲ್ಲಿ ಒಟ್ಟು 9 ಜನ ಮೃತಪಟ್ಟಿದ್ದಾರೆ. ಇನ್ನು, ಅಪಾಯಕ್ಕೆ ಸಿಲುಕಿದ್ದ 13 ಜನರನ್ನು ರಕ್ಷಣೆ ಮಾಡಲಾಗಿದ್ದು, ಇವರು ಗುರುವಾರ ರಾತ್ರಿ 9:30ರ ಸುಮಾರಿಗೆ ವಿಮಾನದ ಮೂಲಕ ಬೆಂಗಳೂರಿಗೆ ಬಂದರು. ರಕ್ಷಣಾ ಕಾರ್ಯಚರಣೆ ಉಸ್ತುವಾರಿಗೆ ತೆರಳಿದ್ದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರೂ ಈ ಚಾರಣಿಗರ ಜೊತೆಗೆ ಬಂದಿದ್ದಾರೆ. ಬುಧವಾರ ಐದು ಮೃತದೇಹಗಳು ಸಿಕ್ಕಿದ್ದವು. ಗುರುವಾರ ಮತ್ತೆ ಕಾರ್ಯಾಚರಣೆ ಆರಂಭಿಸಿ ನಾಲ್ವರು ಮೃತದೇಹಗಳನ್ನು ಪತ್ತೆ ಹಚ್ಚಲಾಗಿತ್ತು. 9 ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಇದೀಗ, ದೆಹಲಿಯಿಂದ ಎರಡು ಪ್ರತ್ಯೇಕ ಇಂಡಿಗೋ ವಿಮಾನಗಳಲ್ಲಿ 4 ಮೃತದೇಹಗಳು ಬೆಂಗಳೂರಿಗೆ ಬಂದಿವೆ. ಮೃತರನ್ನು ಪದ್ಮನಾಭ್, ಸಿಂಧೂ, ಸುಜಾತಾ, ವಿನಾಯಕ್ ಎಂದು ಗುರುತಿಸಲಾಗಿದೆ. ಈಗಾಗಲೇ ಮೂವರ ಮೃತದೇಹಗಳು ಕುಟುಂಬದವರಿಗೆ ಹಸ್ತಾಂತರ ಮಾಡಲಾಗಿದೆ. ಮತ್ತೆರಡು ಮೃತದೇಹಗಳು ಮಧ್ಯಾಹ್ನ ಬರಲಿವೆ. ಪದ್ಮನಾಭ್ ಅವರ ಮೃತದೇಹವನ್ನು ಕುಂದಾಪುರಕ್ಕೆ ತೆಗೆದುಕೊಂಡು ಹೋಗಲು ಆಂಬುಲೇನ್ಸ್ ವ್ಯವಸ್ಥೆ ಮಾಡಲಾಗಿದೆ.

ಈ ಬಗ್ಗೆ ಸಚಿವ ಕೃಷ್ಣಭೈರೇಗೌಡ ಮಾತನಾಡಿ, ಈಗಾಗಲೇ ಮೂವರ ಮೃತದೇಹಗಳು ಕುಟುಂಬದವರಿಗೆ ಹಸ್ತಾಂತರ ಮಾಡಲಾಗಿದೆ. ಉಳಿದ ಮೃತದೇಹಗಳು ಕರೆತರುವ ಕೆಲಸ ಆಗುತ್ತಿದೆ. ಮೃತಪಟ್ಟವರ ಸಂಬಂಧಿಕರಿಗೆ ಅಗತ್ಯ ಸಹಕಾರ ನೀಡಲಾಗುತ್ತೆ. ಮೃತರ ವಿಳಾಸ, ವೈಯಕ್ತಿಕ ವಿಚಾರ ಬಹಿರಂಗಪಡಿಸುವುದಿಲ್ಲ ಎಂದು ಹೇಳಿದರು.

Click Here

LEAVE A REPLY

Please enter your comment!
Please enter your name here