ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ : ಇಲ್ಲಿನ ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ಸೈಬರ್ ಸೆಕ್ಯೂರಿಟಿಯ ಕುರಿತು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ರಾಷ್ಟ್ರೀಯ ಶಿಕ್ಷಣ ನೀತಿ ವಿಷಯಾಧರಿತ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಟಿ.ವಿ. ದೇವರಾಜ್ ಅಡಿಷನಲ್ ಎಸ್.ಐ., ಸೈಬರ್ ಕ್ರೈಮ್ ಡಿಪಾರ್ಟ್ಮೆಂಟ್, ಮಣಿಪಾಲ ಇವರು ವಿವಿಧ ರೀತಿಯ ಸೈಬರ್ ಅಪರಾಧವನ್ನು ತಡೆಗಟ್ಟುವುದು ಮತ್ತು ಅದರಿಂದ ತಪ್ಪಿಸಿಕೊಳ್ಳುವ ರೀತಿಯ ಬಗ್ಗೆ ಮಾತನಾಡುತ್ತಾ, ಹದಿಹರೆಯದ ವಿದ್ಯಾರ್ಥಿಗಳು ತಮ್ಮ ಬುದ್ಧಿಯ ಜೊತೆಗೆ ಬೆರಳುಗಳ ಮೇಲೆ ಕೂಡ ನಿಯಂತ್ರಣ ಪಡೆದುಕೊಳ್ಳುವ ಅಗತ್ಯ ಇದೆ ಎಂದರು.
ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಅಧ್ಯಕ್ಷತೆ ವಹಿಸಿದ್ದು, ಮೊಬೈಲ್ ಬಳಕೆ ಹಾಗೂ ಸಾಮಾಜಿಕ ಜಾಲಾತಾಣಗಳಲ್ಲಿ ತೊಡಗಿಸಿಕೊಳ್ಳುವಾಗ ವಿದ್ಯಾರ್ಥಿಗಳು ಪ್ರಜ್ಞಾವಂತಿಕೆ ಮರೆಯಬಾರದು ಎಂದರು.
ವಾಣಿಜ್ಯ ವಿಭಾಗದ ಮುಖ್ಯಸ್ಥೆ ವೀಣಾ ಭಟ್ ಪ್ರಾಸ್ತಾವಿಸಿದರು. ಕಾರ್ಯಕ್ರಮದ ಸಂಯೋಜಕರಾದ ಜೋಸ್ಲಿನ್ ಅಲ್ಮೇಡಾ ಮತ್ತು ಪೂಜಾ ಕುಂದರ್ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಶ್ರೀನಾಭ ಸ್ವಾಗತಿಸಿ, ನೇಹಾ ಅತಿಥಿಗಳನ್ನು ಪರಿಚಯಿಸಿ, ಸಿಂಚನಾ ವಂದಿಸಿ, ಚಂದನಾ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿ ಸುಹಾನಿ ಕಾರ್ಯಕ್ರಮದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದರು.